ವಿಜಯಸಾಕ್ಷಿ ಸುದ್ದಿ, ಗದಗ: ಡಾ ವ್ಹಿ.ಬಿ. ಹಿರೇಮಠ ಮಹಾವೇದಿಕೆ, ಡಾ ವ್ಹಿ.ಬಿ. ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನ ಗದಗ ಹಾಗೂ ಅಶ್ವಿನಿ ಪ್ರಕಾಶನ ಗದಗ ಇವರ ಸಂಯುಕ್ತಾಶ್ರಯದಲ್ಲಿ ನಡೆಯಲಿರುವ ಅಶ್ವಿನಿ ಪ್ರಕಾಶನದ 4ನೇ ಸಾಹಿತ್ಯ ಸಮ್ಮೇಳನ, 70ನೇ ಕನ್ನಡ ರಾಜ್ಯೋತ್ಸವ ಹಾಗೂ ಡಾ ವ್ಹಿ.ಬಿ. ಹಿರೇಮಠರ 13ನೇ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಮುಂಡರಗಿಯ ಶೋಭಾ ಬಸವರಾಜ ಮೇಟಿಯವರನ್ನು ಆಯ್ಕೆ ಮಾಡಲಾಗಿದೆ.
ಈ ಕಾರ್ಯಕ್ರಮ ನವೆಂಬರ್ 2ರಂದು ಕನಕದಾಸ ಶಿಕ್ಷಣ ಸಮಿತಿಯ ಕೆ.ಎಸ್.ಎಸ್. ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಅಧ್ಯಕ್ಷರು ಅಶ್ವಿನಿ ಪ್ರಕಾಶನ ಹಾಗೂ ಪ್ರತಿಷ್ಠಾನದ ಅಧ್ಯಕ್ಷರಾದ ಡಾ ವ್ಹಿ.ಬಿ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



