ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ತೋಂಟದ ಸಿದ್ಧೇಶ್ವರ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ಶ್ರೇಯಾ ಮೇಟಿ ಕರಾಟೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಇತ್ತೀಚೆಗೆ ತಾಲೂಕಿನ ಹುಲಕೋಟಿ ಗ್ರಾಮದ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಜರುಗಿದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉನ್ನತ ಸಾಧನೆ ತೋರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿಗಳಾದ ಎಸ್.ಎಸ್. ಪಟ್ಟಣಶೆಟ್ಟರ, ಕಾಲೇಜಿನ ಪ್ರಾಚಾರ್ಯರಾದ ವೈ.ಎಸ್. ಮತ್ತೂರ, ಕೊಟ್ರೇಶ ಮೆಣಸಿನಕಾಯಿ ಸೇರಿದಂತೆ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದ್ದಾರೆ.



