HomeSports NewsIndia Vs England, 3rd ODI: ಶತಕ ಸಿಡಿಸಿ ಹೊಸ ದಾಖಲೆ ಬರೆದ ಶುಭ್‌ ಮನ್...

India Vs England, 3rd ODI: ಶತಕ ಸಿಡಿಸಿ ಹೊಸ ದಾಖಲೆ ಬರೆದ ಶುಭ್‌ ಮನ್ ಗಿಲ್‌!

For Dai;y Updates Join Our whatsapp Group

Spread the love

ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಇನ್ನೂ ಆರಂಭಿಕ ಆಟಗಾರ ಶುಭ್‌ಮನ್ ಗಿಲ್ ಜವಾಬ್ದಾರಿಯುತ ಆಟ ಪ್ರದರ್ಶಿಸಿದರು.

95 ಎಸೆತಗಳಲ್ಲಿ ಶತಕ ಬಾರಿಸಿ ಮಿಂಚಿದರು. ಮೊದಲ ಎರಡು ಪಂದ್ಯಗಳಲ್ಲಿ ಗಿಲ್ ಉತ್ತಮ ಪ್ರದರ್ಶನ ನೀಡಿ 87 ಮತ್ತು 60 ರನ್ ಗಳಿಸಿದ್ದರು. ಇಂದಿನ ಪಂದ್ಯದಲ್ಲಿ ಗಿಲ್ ಅಮೋಘ ಪ್ರದರ್ಶನ ನೀಡಿ ಹೊಸ ಮೈಲಿಗಲ್ಲು ತಲುಪಿದ್ದಾರೆ.

ಕೇವಲ 50 ಇನ್ನಿಂಗ್ಸ್‌ಗಳಲ್ಲಿ 2,500 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂಗ್ಲೆಂಡ್ ಎದುರಿನ ಮೂರನೇ ಏಕದಿನ ಪಂದ್ಯದಲ್ಲಿ ಶುಭ್‌ಮನ್ ಗಿಲ್ ಕೇವಲ 102 ಎಸೆತಗಳಲ್ಲಿ 112 ರನ್ ಗಳಿಸಿ ಔಟಾದರು. ಇದರಲ್ಲಿ 14 ಬೌಂಡರಿ ಮತ್ತು 3 ಸಿಕ್ಸರ್‌ಗಳು ಸೇರಿವೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!