ವಿಜಯಪುರ: ಜಿಲ್ಲೆಯ ಸಿಂದಗಿ ಬೈಪಾಸ್ ಬಳಿ ಇಂದು ಸಿಂದಗಿ ಶಾಸಕ ಅಶೋಕ್ ಮನಗೂಳಿ ಅವರ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಘಟನೆಯ ವೇಳೆ ಶಾಸಕರ ಜೊತೆಗೆ ಅವರ ಪುತ್ರಿ ಹಾಗೂ ಸಹೋದರನ ಮಗ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. KA 03 NT 2827 ನಂಬರ್‌ನ ವಿಧಾನಸೌಧ ಪಾಸ್ ಹೊಂದಿದ್ದ ಇನ್ನೋವಾ ಹೈಕ್ರಾಸ್ ಕಾರಿಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಕಲಬುರ್ಗಿಯಿಂದ ಸಿಂದಗಿ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ಡಿಕ್ಕಿಯಾದದ್ದು ತಿಳಿದುಬಂದಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.



