HomeIndia Newsಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸ್ಲೀಪರ್ ಬಸ್‌ಗೆ ಬೆಂಕಿ; 9 ಮಂದಿ ಸಜೀವ ದಹನ!

ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸ್ಲೀಪರ್ ಬಸ್‌ಗೆ ಬೆಂಕಿ; 9 ಮಂದಿ ಸಜೀವ ದಹನ!

For Dai;y Updates Join Our whatsapp Group

ಲಕ್ನೋ: ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲೆಯ ಗ್ರೇಟರ್ ನೋಯ್ಡಾ ವ್ಯಾಪ್ತಿಯ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ತಡರಾತ್ರಿ ಭೀಕರ ದುರಂತ ಸಂಭವಿಸಿದೆ.

ದೆಹಲಿಯಿಂದ ಮಹೋಬಾಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 9 ಮಂದಿ ಸಜೀವ ದಹನವಾಗಿದ್ದು, ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಿಹಾರ ನೋಂದಣಿ ಸಂಖ್ಯೆಯ BR32 PA8647 ಹೊಂದಿದ್ದ ‘ರಾಜ್ ಕಲ್ಪನಾ ಟ್ರಾವೆಲ್ಸ್’ಗೆ ಸೇರಿದ ಬಸ್‌ನಲ್ಲಿ ಸುಮಾರು 35ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಗ್ರೇಟರ್ ನೋಯ್ಡಾದಿಂದ ಆಗ್ರಾ ಕಡೆಗೆ ತೆರಳುತ್ತಿದ್ದ ವೇಳೆ ದಯಾನತ್‌ಪುರ ಗ್ರಾಮದ ಬಳಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಕಾಣಿಸಿಕೊಂಡ ಕೂಡಲೇ ಚಾಲಕ ಬಸ್‌ನ್ನು ಎಕ್ಸ್‌ಪ್ರೆಸ್‌ವೇ ಬದಿಗೆ ನಿಲ್ಲಿಸಿದ್ದಾರೆ. ಆದರೆ ಕೆಲವೇ ಕ್ಷಣಗಳಲ್ಲಿ ದಟ್ಟ ಹೊಗೆ ಹಾಗೂ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿದೆ. ಇದರಿಂದ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ.

ಬಸ್‌ನ ಬಾಗಿಲಿನ ಬಳಿ ಬೆಂಕಿ ಆವರಿಸಿದ್ದರಿಂದ ಅನೇಕ ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ಕಿಟಕಿಗಳ ಗಾಜು ಒಡೆದು ರಸ್ತೆಗೆ ಹಾರಿದ್ದಾರೆ. ಆದರೆ ಗಾಢ ನಿದ್ರೆಯಲ್ಲಿದ್ದವರು ಹಾಗೂ ಸಮಯಕ್ಕೆ ಸರಿಯಾಗಿ ಹೊರಬರಲು ಸಾಧ್ಯವಾಗದ ಮಹಿಳೆಯರು, ವೃದ್ಧರು ಮತ್ತು ವಿಶೇಷ ಚೇತನ ಮಕ್ಕಳು ಸೇರಿದಂತೆ 9 ಮಂದಿ ಬೆಂಕಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಗಾಯಗೊಂಡವರನ್ನು ಸಮೀಪದ ಕೈಲಾಶ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ವಾಹನಗಳು, ಎಕ್ಸ್‌ಪ್ರೆಸ್‌ವೇ ತುರ್ತು ಗಸ್ತು ಪಡೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಘಟನೆಯಿಂದಾಗಿ ಜೆವರ್ ಟೋಲ್ ಹಾಗೂ ಫಲೈಡಾ ಕ್ರಾಸಿಂಗ್ ನಡುವಿನ ಸಂಚಾರವನ್ನು ಸುಮಾರು 20 ನಿಮಿಷಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿ, ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img