ವಿಜಯಸಾಕ್ಷಿ ಸುದ್ದಿ, ಗದಗ: ನೆಹರು ಯುವ ಕೇಂದ್ರ ಗದಗ ಮತ್ತು ಸರ್ವೋದಯ ಯುವಕ ಮಂಡಳ ಇವರ ಸಂಯುಕ್ತ ಆಶ್ರಯದಲ್ಲಿ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ಬಸವರಾಜ್ ಮ.ಕೊಂಚಿಗೇರಿ ಸರಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಗ್ರಾಮೀಣ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಕನಕಮ್ಮ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಶಿಕ್ಷಣದ ಜೊತೆಗೆ ಕ್ರೀಡೆಯನ್ನು ಸಮನಾಗಿ ನೋಡಬೇಕು. ಕ್ರೀಡೆಯಲ್ಲಿ ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಿದಾಗ ನಾವೆಲ್ಲರೂ ಒಂದೇ ಎಂಬ ಮನೋಭಾವ ಮೂಡುತ್ತದೆ. ಶಿಕ್ಷಣ ಮತ್ತು ಕ್ರೀಡೆಯಲ್ಲಿ ಕಡಕೋಳ ವಿಶಿಷ್ಟತೆ ಮೆರೆಯಬೇಕು. ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರು ಪಡೆಯಬೇಕು. ಕ್ರೀಡಾಪಟುಗಳು ಇಲ್ಲಿನ ಮಣ್ಣಿನ ಗುಣವನ್ನು ದೇಶಕ್ಕೆ ಸಾರಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸರ್ವೋದಯ ಸಂಘದ ಅಧ್ಯಕ್ಷರಾದ ಪ್ರಕಾಶ ಬಕ್ಕಸದ, ಉಪನ್ಯಾಸಕ ಮಲ್ಲಪ್ಪ ಹರ್ತಿ ಸ್ವಾಗತಿಸಿದರು. ಉಪನ್ಯಾಸಕ ಶರಣಪ್ಪ ಕಲಗುಡಿ ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿ ಕೊಂಚಿಗೇರಿ ವಂದಿಸಿದರು. ಮಂಜುನಾಥ್ ಹಾರ್ಲಾಪುರ, ರವಿ ಹೊಂಬಾಳಿ, ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.



