HomeKarnataka Newsಈ ಬಾರಿ ಮೈಸೂರು ದಸರಾ ಉದ್ಘಾಟಿಸಲಿರುವ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು!

ಈ ಬಾರಿ ಮೈಸೂರು ದಸರಾ ಉದ್ಘಾಟಿಸಲಿರುವ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು!

For Dai;y Updates Join Our whatsapp Group

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಉದ್ಘಾಟಿಸಲಿದ್ದಾರೆ.

ಈ ವಿಷಯವನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಅಕ್ಟೋಬರ್ 11ರಿಂದ 21ರವರೆಗೆ ಒಟ್ಟು 11 ದಿನಗಳ ಕಾಲ ಮೈಸೂರು ದಸರಾ ಮಹೋತ್ಸವ ನಡೆಯಲಿದೆ. ಅಕ್ಟೋಬರ್ 11ರಂದು ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ದಸರಾಗೆ ವಿಧ್ಯುಕ್ತ ಚಾಲನೆ ದೊರೆಯಲಿದೆ.

ಅಕ್ಟೋಬರ್ 20ರಂದು ಸಾಂಪ್ರದಾಯಿಕ ಆಯುಧ ಪೂಜೆ ನಡೆಯಲಿದೆ. ಅಕ್ಟೋಬರ್ 21ರಂದು ವಿಜಯದಶಮಿ ಅಂಗವಾಗಿ ಮೈಸೂರಿನ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ನಡೆಯಲಿದೆ. ಅದೇ ದಿನ ಸಂಜೆ ಬನ್ನಿಮಂಟಪದಲ್ಲಿ ಪಂಜಿನ ಕವಾಯತು ಆಯೋಜಿಸಲಾಗಿದ್ದು, ಇದರೊಂದಿಗೆ ದಸರಾ ಮಹೋತ್ಸವದ ಪ್ರಮುಖ ಕಾರ್ಯಕ್ರಮಗಳು ನಡೆಯಲಿವೆ.

ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ 18ನೇ ಪೀಠಾಧಿಪತಿಗಳಾಗಿದ್ದಾರೆ. ಸಾಮಾಜಿಕ ಸೇವೆ, ಜಲ ಸಂರಕ್ಷಣೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಸೇವೆಯಿಂದಾಗಿ ನಾಡಿನಾದ್ಯಂತ ಗೌರವಕ್ಕೆ ಪಾತ್ರರಾಗಿದ್ದಾರೆ.

2002ರ ಡಿಸೆಂಬರ್ 13ರಂದು ಮಠದ ಪೀಠಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅವರು, ಉತ್ತರ ಕರ್ನಾಟಕ ಭಾಗದ ನೀರಿನ ಸಮಸ್ಯೆ ನಿವಾರಣೆಗೆ ‘ಜಲ ದೀಕ್ಷೆ’ ಅಭಿಯಾನ ಆರಂಭಿಸಿದ್ದರು. ಈ ಮೂಲಕ ಕೆರೆಗಳ ಹೂಳೆತ್ತುವಿಕೆ ಹಾಗೂ ಜಲ ಸಂರಕ್ಷಣಾ ಕಾರ್ಯಗಳಿಗೆ ಒತ್ತು ನೀಡಿದ್ದರು.

ಅವರ ನೇತೃತ್ವದಲ್ಲಿ ಮಠದಲ್ಲಿ ಅನ್ನ, ಅರಿವು ಮತ್ತು ಆಧ್ಯಾತ್ಮದ ತ್ರಿವಿಧ ದಾಸೋಹ ಪರಂಪರೆ ಮುಂದುವರಿದಿದೆ. ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ವಸತಿ ಮತ್ತು ಶಿಕ್ಷಣ ಸೌಲಭ್ಯಗಳನ್ನು ಸಹ ನೀಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಈ ಬಾರಿ ಮೈಸೂರು ದಸರಾ ಮಹೋತ್ಸವವನ್ನು ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಉದ್ಘಾಟಿಸಲಿರುವುದು ವಿಶೇಷವಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img