HomeDavanagereಸಾಹಿತಿ ಮಳಲಕೆರೆ ಗುರುಮೂರ್ತಿ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ

ಸಾಹಿತಿ ಮಳಲಕೆರೆ ಗುರುಮೂರ್ತಿ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ದಾವಣಗೆರೆ: ಸಿದ್ಧಲಿಂಗ ನಾಮಾಂಕಿತದಲ್ಲಿ ಸಾವಿರಾರು ತ್ರಿಪದಿಗಳನ್ನು ರಚಿಸಿದ್ದ ಹಿರಿಯ ಸಾಹಿತಿ ಮಳಲಕೆರೆ ಗುರುಮೂರ್ತಿಯವರು ದಾವಣಗೆರೆಯಲ್ಲಿ ತಮ್ಮ 86ನೇ ವಯಸ್ಸಿನಲ್ಲಿ ಅಗಲಿರುವುದಕ್ಕೆ ಬಾಳೆಹೊನ್ನೂರು

ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಳಗನ್ನಡ, ನಡುಗನ್ನಡ ಕಾವ್ಯಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಶ್ರೀಯುತರು ಅನೇಕ ಕೃತಿಗಳನ್ನು, ವಿಶೇಷವಾಗಿ ತ್ರಿಪದಿಗಳಲ್ಲಿ ಸಿದ್ಧಾಂತ ಶಿಖಾಮಣಿ ರಚಿಸಿದ್ದನ್ನು ಮರೆಯುವಂತಿಲ್ಲ. ಶ್ರೀ ರಂಭಾಪುರಿ ಪೀಠದೊಡನೆ ಆತ್ಮೀಯ ಸಂಪರ್ಕ ಹೊಂದಿದ್ದ ಶ್ರೀಯುತರಿಗೆ ಶ್ರೀ ಪೀಠದಿಂದ `ತ್ರಿಪದಿ ಭೂಷಣ’ ಪ್ರಶಸ್ತಿಯನ್ನು ಹಾಗೂ 2010ರಲ್ಲಿ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದಲ್ಲಿ `ಸಾಹಿತ್ಯ ಸಿರಿ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಅತ್ಯಂತ ಸರಳ ಸಜ್ಜನಿಕೆ ರೂಢಿಸಿಕೊಂಡಿದ್ದ ಮಳಲಕೆರೆ ಗುರುಮೂರ್ತಿಯವರು ಸ್ನೇಹ ಜೀವಿಗಳಾಗಿದ್ದರು. ಅವರ ಅಗಲಿಕೆಯಿಂದ ಅಪರೂಪದ ಪ್ರತಿಭೆಯೊಂದನ್ನು ಕಳೆದುಕೊಂಡAತಾಗಿದೆ. ಅಗಲಿದ ಅವರ ಪವಿತ್ರ ಆತ್ಮಕ್ಕೆ ದಯಾಘನನಾದ ಪರಮಾತ್ಮನು ಚಿರಶಾಂತಿಯನ್ನು ಅನುಗ್ರಹಿಸಲಿ, ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ನೀಡಲಿ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!