HomeKarnataka Newsರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಯ ದುರ್ಬಳಕೆ ಸತ್ಯ ಮರೆಮಾಚುವ ಕೆಲಸ: ಬಿ.ವೈ.ವಿಜಯೇಂದ್ರ

ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಯ ದುರ್ಬಳಕೆ ಸತ್ಯ ಮರೆಮಾಚುವ ಕೆಲಸ: ಬಿ.ವೈ.ವಿಜಯೇಂದ್ರ

For Dai;y Updates Join Our whatsapp Group

Spread the love

ಬೆಳಗಾವಿ: ಸದನದಲ್ಲಿ ವಿಪಕ್ಷ ನಾಯಕರು ಮಾತನಾಡುವಾಗ ಅದನ್ನು ಕೇಳುವ ವ್ಯವಧಾನವೂ ಆಡಳಿತ ಪಕ್ಷದವರಿಗೆ ಇಲ್ಲವೆಂದಾದರೆ, ಇದು ಖಂಡಿತ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. 9-10 ದಿನಗಳ ಕಾಲ ಸದನ ನಡೆಯುತ್ತದೆ. ಎರಡು ದಿನ ಕಳೆದಿದೆ. ಸದನದ ಸಮಯ ವ್ಯರ್ಥ ಆಗಬಾರದು. ನಾಡಿನ ರೈತರ, ನಿರುದ್ಯೋಗಿಗಳ, ನೀರಾವರಿ ವಿಚಾರದಲ್ಲಿ ಸಮರ್ಪಕ ಉತ್ತರ ಪಡೆಯುವುದೇ ನಮ್ಮ ಉದ್ದೇಶ ಎಂದು ಸ್ಪಷ್ಟಪಡಿಸಿದರು.

ಸದನದಲ್ಲಿ ರಾಜ್ಯದ ರೈತರ ಮತ್ತು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ರಾಜ್ಯ ಸರಕಾರ ಸ್ಪಂದಿಸುತ್ತಿದ್ದರೆ ಅದು ನಮಗೆ ಮಾಡುವ ಉಪಕಾರವಲ್ಲ; ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಮೊನ್ನೆಯಿಂದ ಆರಂಭವಾಗಿದೆ. ನಾಡಿನ ಜ್ವಲಂತ ಸಮಸ್ಯೆ, ರೈತರ ಸಂಕಷ್ಟ, ಅಪೂರ್ಣ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲು ಅಧಿವೇಶನ ಕರೆದಿದ್ದಾರೆ. ಇವರೇನೂ ನಮಗೆ ಉಪಕಾರ ಮಾಡುತ್ತಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ಸರಕಾರ ಸತ್ಯ ಮರೆಮಾಚುವ ಕೆಲಸ ಮಾಡುತ್ತಿದೆ. ನಿನ್ನೆಯೂ ಬಿಜೆಪಿ ರೈತ ಮೋರ್ಚಾ ವತಿಯಿಂದ ನಾಡಿನ ರೈತರ ಸಮಸ್ಯೆ ಕುರಿತು ಹೋರಾಟ ನಡೆಸಿದ್ದೆವು. ಹೋರಾಟಗಾರರು ಹೋರಾಟದ ಸ್ಥಳಕ್ಕೆ ತಲುಪದಂತೆ ಅಡೆತಡೆ ಒಡ್ಡಿದ್ದರು. ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿದ್ದಾರೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು.

ನಿರುದ್ಯೋಗಿ ಯುವಜನರು ಸಾಕಷ್ಟು ವರ್ಷಗಳಿಂದ ತಪಸ್ಸಿನಂತೆ ಕೆಪಿಎಸ್ಸಿ, ಇತರ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡಿ ಉದ್ಯೋಗದ ನಿರೀಕ್ಷೆಯಲ್ಲಿದ್ದರು. ಅವರು ಬೀದಿಗಿಳಿದು ಹೋರಾಟ ಮಾಡುವುದು ಅಪರಾಧವೆಂದು ಸರಕಾರಕ್ಕೆ ಅನಿಸಿದರೆ, ಸರಕಾರದ ಈ ಧೋರಣೆ ಸರಿಯಲ್ಲ; ಇದರ ಕುರಿತು ಸದನದಲ್ಲೂ ಚರ್ಚೆ ಮಾಡುವುದಾಗಿ ತಿಳಿಸಿದರು.

ರಾಹುಲ್ ಗಾಂಧಿಯವರು ಭಾರತ್ ಜೋಡೋ ಸಂದರ್ಭದಲ್ಲಿ ಬಹಳಷ್ಟು ಭರವಸೆಗಳನ್ನು ನೀಡಿ ಹೋಗಿದ್ದರು. ರಾಜ್ಯದಲ್ಲಿ 2.5 ಲಕ್ಷ ಸರಕಾರಿ ಉದ್ಯೋಗಗಳು ನೇಮಕಾತಿ ಇಲ್ಲದೇ ಖಾಲಿ ಇವೆ. ಅವುಗಳನ್ನು ಭರ್ತಿ ಮಾಡುವ ಭರವಸೆ ಹಾಗೇ ಇದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಹತಾಶ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ದೂರಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!