HomeKarnataka Newsಹಿಂದೂಗಳ ಮೇಲಿನ ದಾಳಿಗೆ ರಾಜ್ಯ ಸರ್ಕಾರ ಹೊಣೆ: ಕಾಂಗ್ರೆಸ್ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಹಿಂದೂಗಳ ಮೇಲಿನ ದಾಳಿಗೆ ರಾಜ್ಯ ಸರ್ಕಾರ ಹೊಣೆ: ಕಾಂಗ್ರೆಸ್ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

For Dai;y Updates Join Our whatsapp Group

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಹಿಂದೂಗಳ ಮೇಲಿನ ಹಲ್ಲೆ ಮತ್ತು ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದಲ್ಲಿ ತೊಡಗಿದೆ ಎಂದು ಟೀಕಿಸಿದರು.

ಪ್ರಧಾನಮಂತ್ರಿ ಹುದ್ದೆಗೆ ಗಾಂಧಿ ಕುಟುಂಬದವರೇ ಬರಬೇಕು ಎಂಬ ಮನೋಭಾವ ಕಾಂಗ್ರೆಸ್ ಪಕ್ಷಕ್ಕಿದೆ. ಆದರೆ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ದೇಶವನ್ನು ಜಾಗತಿಕ ಮಟ್ಟದಲ್ಲಿ ಶಕ್ತಿಶಾಲಿ ರಾಷ್ಟ್ರವನ್ನಾಗಿ ರೂಪಿಸುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಯಲ್ಲಾಪುರದಲ್ಲಿ ದಲಿತ ಸಮುದಾಯದ ಯುವತಿಯ ಹತ್ಯೆ ನಡೆದರೂ ಸರ್ಕಾರದ ಯಾವುದೇ ಸಚಿವರು ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿಲ್ಲ. ಅದೇ ರೀತಿ ಕೊಪ್ಪಳದಲ್ಲಿ ಪರಿಶಿಷ್ಟ ಪಂಗಡದ ವ್ಯಕ್ತಿಯ ಹತ್ಯೆ ಪ್ರಕರಣದಲ್ಲೂ ಸರ್ಕಾರದ ಪ್ರತಿನಿಧಿಗಳು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ ಎಂದು ಅವರು ಆರೋಪಿಸಿದರು.

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದು, ಇದರಿಂದ ಸಮಾಜದಲ್ಲಿ ಅಸಮಾಧಾನ ಹೆಚ್ಚುತ್ತಿದೆ ಎಂದು ವಿಜಯೇಂದ್ರ ಟೀಕಿಸಿದರು. ಸಮಾಜದಲ್ಲಿ ಜಾಗೃತಿ ಮೂಡಿಸಿ ಎಲ್ಲ ವರ್ಗಗಳಿಗೂ ಸಾಮಾಜಿಕ ನ್ಯಾಯ ದೊರಕುವಂತೆ ಮಾಡಲು ಬಿಜೆಪಿ ಬದ್ಧವಾಗಿದೆ ಎಂದರು.

ಕಾಂಗ್ರೆಸ್ ತನ್ನ ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಇತ್ತೀಚೆಗೆ ಹಾವೇರಿ ಜಿಲ್ಲೆಯ ನರೇಗಲ್‌ನಲ್ಲಿ ಹಾಲುಮತ ಸಮಾಜದ ಲೋಹಿತ್ ಕುರುಬ ಹಾಗೂ ಶಿವರಾಮ ಕುರುಬ ಅವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಉಲ್ಲೇಖಿಸಿದರು.

ಹೋರಿ ಬೆದರಿಸುವ ವೇಳೆ ಪಟಾಕಿ ಸಿಡಿಸಿದ ವಿಚಾರವನ್ನು ನೆಪವನ್ನಾಗಿ ಮಾಡಿಕೊಂಡು ಕೆಲವರು ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಳಿಸಿದ್ದಾರೆ ಎಂದು ಅವರು ಹೇಳಿದರು. ಇಂತಹ ಘಟನೆ ನಡೆದರೂ ಮುಖ್ಯಮಂತ್ರಿ ಅಥವಾ ಯಾವುದೇ ಸಚಿವರು ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ ಧೈರ್ಯ ತುಂಬಿಲ್ಲ ಎಂದು ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img