HomeIndia NewsPahalgam Attack: ಮೂವರು ಕನ್ನಡಿಗರ ಪಾರ್ಥಿವ ಶರೀರ ಸಾಗಿಸಲು ಕ್ರಮ - ಸಚಿವ ಪ್ರಹ್ಲಾದ್ ಜೋಶಿ

Pahalgam Attack: ಮೂವರು ಕನ್ನಡಿಗರ ಪಾರ್ಥಿವ ಶರೀರ ಸಾಗಿಸಲು ಕ್ರಮ – ಸಚಿವ ಪ್ರಹ್ಲಾದ್ ಜೋಶಿ

For Dai;y Updates Join Our whatsapp Group

Spread the love

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮೂವರು ಕನ್ನಡಿಗರ ಪಾರ್ಥಿವ ಶರೀರ ಸಾಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂಬ ಮಾಹಿತಿಯಿದೆ. ಮೃತರ ಪಾರ್ಥಿವ ಶರೀರ, ಗಾಯಾಳುಗಳು, ಕುಟುಂಬಸ್ಥರು ಹಾಗೂ ಪ್ರವಾಸಿಗರನ್ನು ಸ್ವಂತ ಊರು-ಮನೆಗಳಿಗೆ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಹೆಚ್ಚಿನ ವಿಮಾನ ವ್ಯವಸ್ಥೆ ಸಹ ಮಾಡಲಾಗಿದೆ ಎಂದರು.

ಕರ್ನಾಟಕದ ಅನೇಕರು ಪಹಲ್ಗಾಮ್ ಪ್ರವಾಸಿ ತಾಣದಲ್ಲಿದ್ದು, ರಾಜ್ಯಕ್ಕೆ ಮರಳಲು ಬಯಸಿದ್ದರಿಂದ ಅವರೆಲ್ಲರನ್ನು ಕರೆತರಲು ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, ಗ್ರಾಹಕ ವ್ಯವಹಾರಗಳ ಸಚಿವನಾಗಿ ವಿಮಾನಯಾನ ಕಂಪನಿಗಳು ಹೆಚ್ಚಿನ ಟಿಕೆಟ್ ದರ ಕಲ್ಪಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!