HomeGadag Newsಹೆಸರುಕಾಳು ಖರೀದಿ ಸಮಸ್ಯೆ ಪರಿಹಾರಕ್ಕೆ ಕ್ರಮ

ಹೆಸರುಕಾಳು ಖರೀದಿ ಸಮಸ್ಯೆ ಪರಿಹಾರಕ್ಕೆ ಕ್ರಮ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರ ಸದಾ ರೈತರ ಪರವಾಗಿದೆ. ಹೆಸರುಕಾಳು ಬೆಂಬಲ ಬೆಲೆಯಲ್ಲಿ ಖರೀದಿಸುವ ಸಂಬಂಧ ಯಾವುದೇ ಕಾರಣಕ್ಕೂ ರೈತರಿಗೆ ಹಾನಿಯಾಗಲು ಬಿಡುವುದಿಲ್ಲ ಎಂದು ರಾಜ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.

ಬಿಂಕದಕಟ್ಟಿಯ ಗ್ರಾಮ ಪಂಚಾಯಿತಿ ಭವನದಲ್ಲಿ ಹೆಸರುಕಾಳು ಖರೀದಿ ಪ್ರಕ್ರಿಯೆಯಲ್ಲಿ ಉದ್ಭವಿಸಿರುವ ತಾಂತ್ರಿಕ ಮತ್ತು ಗುಣಮಟ್ಟದ ಅಂಶಗಳ ಸಮಸ್ಯೆಗಳ ಪರಿಹಾರಕ್ಕಾಗಿ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ರೈತರ ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಗಮನವಿಟ್ಟು ಆಲಿಸಿದ ಸಚಿವ ಡಾ. ಎಚ್.ಕೆ. ಪಾಟೀಲ, ಸಂಬಂಧಿಸಿದ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿ, ಕೃಷಿಕರಿಗೆ ನ್ಯಾಯವಾಗುವಂತೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಯಡಿ ಈವರೆಗೆ ಗದಗ ಜಿಲ್ಲೆಯಲ್ಲಿ ಕೇವಲ 440 ಕ್ವಿಂಟಲ್ ಹೆಸರುಕಾಳುಗಳನ್ನು ಮಾತ್ರ ಖರೀದಿಸಲಾಗಿದೆ ಎಂದು ಮಾರ್ಕೆಟಿಂಗ್ ಫೆಡರೇಶನ್ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು. ಸರ್ಕಾರದ ಮಾರ್ಗಸೂಚಿ ಪ್ರಕಾರ ಹೆಚ್ಚಿನ ಹೆಸರುಕಾಳು ಬೆಳೆ ಗುಣಮಟ್ಟದ ಆಧಾರದ ಮೇಲೆ ‘ರಿಜೆಕ್ಟ್’ ಆಗುತ್ತಿರುವುದನ್ನು ಅವರು ತಿಳಿಸಿದರು.

ಹೆಸರುಕಾಳು ಬೆಳೆ ಹಾನಿಗೊಳಗಾಗಿಲ್ಲ, ಕೇವಲ ಸ್ವಲ್ಪ ಕಪ್ಪು ಚುಕ್ಕೆಗಳು ಕಂಡುಬರುವ ಮಟ್ಟಿಗೆ ಮಾತ್ರ ವ್ಯತ್ಯಾಸವಿದ್ದು, ಇದಕ್ಕೂ ವಾತಾವರಣದ ವೈಪರಿತ್ಯಗಳು ಕಾರಣವೆಂದು ರೈತ ಮುಖಂಡರು ವಿವರಿಸಿದರು. ಇಂತಹ ಪರಿಸ್ಥಿತಿಯನ್ನು ಪರಿಗಣಿಸಿ, ಸರ್ಕಾರವು ಮಾರ್ಗಸೂಚಿಗಳನ್ನು ಸಡಿಲಗೊಳಿಸಿ ರೈತರಿಂದ ಹೆಸರುಕಾಳು ಖರೀದಿ ಮಾಡಿ ರೈತರ ಆರ್ಥಿಕ ಹಾನಿಯನ್ನು ತಪ್ಪಿಸಬೇಕೆಂದು ಸಚಿವರ ಗಮನಕ್ಕೆ ತಂದರು.

ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಮಾತನಾಡಿ, ರೈತರ ಸಮಸ್ಯೆಗೆ ಜಿಲ್ಲಾಡಳಿತ ಸ್ಪಂದಿಸುತ್ತಿದೆ. ರೈತರು ಬೆಳೆದ ಹೆಸರು ಖರೀದಿಗೆ ಇರುವ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಲು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅವರ ಸೂಚನೆಯಂತೆ ಕ್ರಮ ವಹಿಸಿ ಪ್ರಯತ್ನಿಸಲಾಗುವುದು. ರೈತರ ಶ್ರಮಕ್ಕೆ ಹಾನಿಯಾಗದಂತೆ ಜಿಲ್ಲಾಡಳಿತ ಕಾರ್ಯನಿರ್ವಹಿಸುತ್ತದೆ ಎಂದರು.

ಸಭೆಯಲ್ಲಿ ಆನಂದಸ್ವಾಮಿ ಗಡ್ಡದೇವರಮಠ, ರವಿ ಮೂಲಿಮನಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ತಾ.ಪಂ ಇಓ ಮಲ್ಲಯ್ಯ ಕೆ, ತಹಸೀಲ್ದಾರರ ಶ್ರೀನಿವಾಸ್ ಮೂರ್ತಿ, ಕೃಷಿ ಮಾರುಕಟ್ಟೆ ಸಮಿತಿ ಸಹಾಯಕ ನಿರ್ದೇಶಕರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ರೈತ ಮುಖಂಡರಾದ ಅಪ್ಪಣ್ಣ ಇನಾಮತಿ, ಸಿ.ಬಿ. ದೊಡ್ಡಗೌಡ್ರ, ಬಿ.ಆರ್. ದೇವರೆಡ್ಡಿ, ಗ್ರಾ.ಪಂ ಅಧ್ಯಕ್ಷ ನಿಂಗಪ್ಪ ಪರಪ್ಪನವರ, ಉಪಾಧ್ಯಕ್ಷೆ ದ್ಯಾಮವ್ವ ಆರಟ್ಟಿ, ಸದಸ್ಯರಾದ ತಿಮ್ಮನಗೌಡ್ರ, ಪತ್ತೆಸಾಬ್ ನದಾಫ್, ವೆಂಕಟೇಶ್ ಕುನಿ, ಮಂಜುನಾಥ ಮಕಳಿ, ಭೀಮವ್ವ ಬೇವಿನಕಟ್ಟಿ, ಲಕ್ಷ್ಮೀ ಮೂಲಿಮನಿ, ತುಳಸ ತಿಮ್ಮನಗೌಡ್ರ, ಜೈಬುನಬಿ ಸೋನೆಖಾನವರ, ಅಶೋಕ ಕರೂರ, ದೇವೇಂದ್ರ ಗೌಡ್ರು, ಕರಿಗೌಡ್ರ, ಗಾಯತ್ರಿ ಖಾನಾಪುರ, ಗಂಗವ್ವ ತಡಿಸಿ ಮುಂತಾದವರು ಹಾಜರಿದ್ದರು.

ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಮಾತನಾಡಿ, ಗದಗ ಜಿಲ್ಲೆಯಲ್ಲಿ 1.23 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹೆಸರುಕಾಳು ಬಿತ್ತನೆ ಮಾಡಲಾಗಿತ್ತು. ಅದರಲ್ಲಿ 96043 ಹೆಕ್ಟೇರ್ ಪ್ರದೇಶದ ಹೆಸರುಕಾಳು ಹಾನಿಯಾಗಿದೆ. ಸರ್ಕಾರ ಹೆಸರುಕಾಳು ಖರೀದಿಗಾಗಿ ಪ್ರತಿ ಕ್ವಿಂಟಲ್ ಕಾಳಿಗೆ 8768 ರೂಗಳನ್ನು ನಿಗದಿಪಡಿಸಿದೆ. ಜಿಲ್ಲೆಯಲ್ಲಿ ಒಟ್ಟು 57 ಕಡೆಗಳಲ್ಲಿ ಬೆಂಬಲ ಬೆಲೆಯಲ್ಲಿ ಹೆಸರು ಖರೀದಿ ಕೇಂದ್ರ ತೆರೆಯಲಾಗಿದೆ ಎಂದು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!