HomeKarnataka Newsಭಟ್ಕಳದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

ಭಟ್ಕಳದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

For Dai;y Updates Join Our whatsapp Group

ಕಾರವಾರ: ಗಣೇಶ ವಿಸರ್ಜನಾ ಮೆರವಣಿಗೆ ಸಾಗುತ್ತಿದ್ದ ವೇಳೆ ಮಸೀದಿ ಹಾಗೂ ಮದರಸಾ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.

ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಬುಧವಾರ ರಾತ್ರಿ ಆಯೋಜಿಸಿದ್ದ ಮೆರವಣಿಗೆಯ ವೇಳೆ ಈ ಘಟನೆ ಸಂಭವಿಸಿದೆ.

ತಲಾಂದದಿಂದ ಆರಂಭಗೊಂಡಿದ್ದ ಗಣೇಶ ವಿಸರ್ಜನಾ ಮೆರವಣಿಗೆ ಗುಳ್ಳೆ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿತ್ತು. ಈ ವೇಳೆ ಮಾರ್ಗಮಧ್ಯದಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ತಾಜುಸುನ್ನಾ ಅರೇಬಿಕ್ ಮದರಸಾ ಮೇಲೆ ಅಪರಿಚಿತರು ಕಲ್ಲು ತೂರಿದ್ದಾರೆ ಎನ್ನಲಾಗಿದೆ.

ಕಲ್ಲು ತೂರಾಟದಿಂದ ಮಸೀದಿ ಹಾಗೂ ಮದರಸಾದ ಕಿಟಕಿ ಗಾಜುಗಳು ಪುಡಿಯಾಗಿದ್ದು, ಕಟ್ಟಡಕ್ಕೆ ಹಾನಿಯಾಗಿದೆ. ಘಟನೆ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮುರಿನಕಟ್ಟೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಘಟನೆ ಕುರಿತು ಬಂದರು ರಸ್ತೆ ನಿವಾಸಿಗಳಾದ ಅಬ್ದುಲ್ ಅಲಿಂ ಹಾಗೂ ಶಾಹುಲ್ ಅಮೀನ್ ಗವಾಯಿ ಅವರು ನೀಡಿದ ದೂರಿನ ಆಧಾರದ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲ್ಲು ತೂರಾಟ ನಡೆಸಿದವರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img