ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗ ಆಂಗ್ಲ ಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿ ವಿಜಯ ಫಕ್ಕೀರೇಶ ಕಾಡಣ್ಣವರ 2026ನೇ ಸಾಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ್ದಾನೆ.
ಬಸಾಪೂರ ಗ್ರಾಮದ ವಿದ್ಯಾರ್ಥಿಯಾಗಿರುವ ವಿಜಯ, ರಾಜ್ಯ ಮಟ್ಟದಲ್ಲಿ 100ನೇ ರ್ಯಾಂಕ್ ಹಾಗೂ ಗದಗ ಜಿಲ್ಲೆಯಲ್ಲಿ 2ನೇ ರ್ಯಾಂಕ್ ಗಳಿಸಿ ತಾಲೂಕಿನ ಗೊಜನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.



