HomeGadag Newsಉದ್ದಿಮೆಗಳಿಗೆ ತೊಂದರೆಯಾಗದಂತೆ ಕ್ರಮವಹಿಸಿ

ಉದ್ದಿಮೆಗಳಿಗೆ ತೊಂದರೆಯಾಗದಂತೆ ಕ್ರಮವಹಿಸಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯಪತ್ರದ ಅಧಿಸೂಚನೆಯಲ್ಲಿ ಸೂಚಿಸಿರುವಂತೆ ಭಾರತ ಸರ್ಕಾರದ ಕೈಗಾರಿಕಾ ಇಲಾಖೆಯಲ್ಲಿ ನೋಂದಣಿಯಾಗಿರುವ ಉದ್ದಿಮೆಗಳಿಗೆ ನಗರ ಸ್ಥಳೀಯ ಸಂಸ್ಥೆಗಳಿಂದ ಉದ್ದಿಮೆ ಪರವಾನಿಗೆ (ಡಿ.ಓ.ಟಿ) ಲೈಸನ್ಸ್ನಲ್ಲಿ ವಿನಾಯತಿ ನೀಡುವ ಕುರಿತು ಸುತ್ತೋಲೆ ಹೊರಡಿಸಿದ್ದು, ಅತೀ ಸಣ್ಣ ಸಣ್ಣ ಮತ್ತು ಮಧ್ಯಮ ಎಂಟರಪ್ರೈಸಸ್ ಉದ್ಯಮಗಳು, ಜಿಲ್ಲಾ ಕೈಗಾರಿಕಾ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡಿರುವ ಉದ್ಯಮಗಳಿಗೆ ನಗರ ಸ್ಥಳೀಯ ಸಂಸ್ಥೆಯಿAದ ಪರವಾನಿಗೆ ವಿನಾಯಿತಿ ನೀಡುವ ಬ ಸುತ್ತೋಲೆಯಲ್ಲಿ ಆದೇಶಿಸಲಾಗಿರುತ್ತದೆ.

ಆದ್ದರಿಂದ ಉದ್ದಿಮೆ ಪರವಾನಿಗೆಗೆ ವಿನಾಯತಿ ಕೋರುವ ಪ್ರಕರಣಗಳಲ್ಲಿ ಸಂಬAಧಪಟ್ಟ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡಿರುವ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಉದ್ದಿಮೆ ಪರವಾನಿಗೆಯಲ್ಲಿ ವಿನಾಯಿತಿ ಇದ್ದರೂ ಕೂಡಾ ಗದಗ-ಬೆಟಗೇರಿ ನಗರ ಸಭೆಯಿಂದ ಸ್ಥಳೀಯ ಉದ್ದಿಮೆ ಪರವಾನಿಗೆ ಪಡೆದುಕೊಳ್ಳಬೇಕೆಂದು ತಿಳಿಸುತ್ತಿದ್ದಾರೆ. ಈಗಾಗಲೇ ನಗರ ಸಭೆಗೆ ಪತ್ರದ ಮುಖಾಂತರ ಹಲವಾರು ಬಾರಿ ಕರ್ನಾಟಕ ರಾಜ್ಯಪತ್ರದ ಪ್ರತಿ ಮತ್ತು ಪೌರಾಡಳಿತ ನಿರ್ದೇಶನಾಲಯದವರ ಸುತ್ತೋಲೆ ಪ್ರತಿಯನ್ನು ಕೂಡಾ ನೀಡಿದರು. ಅದನ್ನು ಲೆಕ್ಕಿಸದೇ ಪುನಃ ಎಂ.ಎಸ್.ಎಂ.ಇ. ಪರವಾನಿಗೆ ಪಡೆದವರಿಗೆ ತೊಂದರೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿಯವರಿಗೆ ಸಂಸ್ಥೆಯ ಅಧ್ಯಕ್ಷ ತಾತನಗೌಡ ಎಸ್.ಪಾಟೀಲ ಇವರ ನಿಯೋಗದೊಂದಿಗೆ ತೆರಳಿ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಗಳು ನಗರಸಭೆಯ ಪೌರಾಯುಕ್ತರೊಂದಿಗೆ ಈ ವಿಷಯವಾಗಿ ಚರ್ಚಿಸಿ ಎಂ.ಎಸ್.ಎA.ಇ. ಉದ್ದಿಮೆಗಳಿಗೆ ತೊಂದರೆಯಾಗದAತೆ ಕ್ರಮವಹಿಸುವುದಾಗಿ ಭರವಸೆ ನೀಡಿದರು.

ನಿಯೋಗದಲ್ಲಿ ಸಂಸ್ಥೆಯ ಮಾಜಿ ಅಧ್ಯಕ್ಷ ಶೇಖಣ್ಣ ಫ.ಗದ್ದಿಕೇರಿ, ಉಪಾಧ್ಯಕ್ಷ ವಿಜಯಕುಮಾರ ಎಸ್.ಮಾಟಲದಿನ್ನಿ, ಸಹ ಗೌರವ ಕಾರ್ಯದರ್ಶಿ ಸೋಮನಾಥ ಕೆ.ಜಾಲಿ, ಕೋಶಾಧ್ಯಕ್ಷ ಸಂಜಯ ಸಿ.ಬಾಗಮಾರ ಉಪಸ್ಥಿತರಿದ್ದರೆಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಅಶೋಕಗೌಡ ಕೆ.ಪಾಟೀಲ ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!