HomeIndia Newsತಮಿಳುನಾಡು| ಎರಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ: 11 ಮಂದಿ ದುರ್ಮರಣ!

ತಮಿಳುನಾಡು| ಎರಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ: 11 ಮಂದಿ ದುರ್ಮರಣ!

For Dai;y Updates Join Our whatsapp Group

Spread the love

ತಮಿಳುನಾಡು:- ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ 11 ಮಂದಿ ಸಾವನ್ನಪ್ಪಿರುವ ಘಟನೆ ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಜರುಗಿದೆ.

ಘಟನೆಯಲ್ಲಿ 20 ಜನರು ಗಾಯಗೊಂಡಿದ್ದಾರೆ. ತಿರುಪತ್ತೂರು ಪ್ರದೇಶದ ಪಿಳ್ಳೈಯಾರ್ಪಟ್ಟಿಯಿಂದ ಐದು ಕಿಲೋಮೀಟರ್ ದೂರದಲ್ಲಿ ಈ ಅಪಘಾತ ಸಂಭವಿಸಿದೆ. ಒಂದು ಬಸ್ ತಿರುಪ್ಪೂರಿನಿಂದ ಕಾರೈಕುಡಿಗೆ ಪ್ರಯಾಣಿಸುತ್ತಿತ್ತು. ಇನ್ನೊಂದು ಬಸ್ ಕಾರೈಕುಡಿಯಿಂದ ದಿಂಡಿಗಲ್ ಜಿಲ್ಲೆಯ ಕಡೆಗೆ ಪ್ರಯಾಣಿಸುತ್ತಿತ್ತು.

ರಕ್ಷಣಾ ತಂಡಗಳು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಿದ್ದು, ಅಪಘಾತದ ಕಾರಣ ಮತ್ತು ಆಸ್ಪತ್ರೆಗೆ ದಾಖಲಾದವರ ಸ್ಥಿತಿಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!