ಚಾಮರಾಜನಗರ:- ತಮಿಳುನಾಡಿನ ತಾಯಿ-ಮಗ ಚಾಮರಾಜನಗರದ ಮೇಲೂರು ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ಮಾಹಿತಿ ಆಧರಿಸಿ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ 40ರ ಹರೆಯದ ಮಹಿಳೆ ಮತ್ತು 10 ವರ್ಷದ ಬಾಲಕನ ಶವ ಎಂದು ಗುರುತಿಸಲಾಗಿದೆ.
ಮೃತರ ಗುರುತು ಪತ್ತೆ ಹಚ್ಚುವಲ್ಲಿ ಪೊಲೀಸರು ನಿರತರಾಗಿದ್ದಾರೆ. ತಮಿಳುನಾಡಿನಿಂದ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಡಿವೈಎಸ್‌ಪಿ ಲಕ್ಷ್ಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



