ಬೆಂಗಳೂರು:- ಮತಾಂತರಕ್ಕೆ ಒಪ್ಪದಿದ್ದಕ್ಕೆ ಹಿಂದೂ ಯುವತಿಯನ್ನು ದೈಹಿಕವಾಗಿ ಬಳಸಿಕೊಂಡು ಕೈಕೊಟ್ಟಿದ್ದ ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮೊಹಮ್ಮದ್ ಇಶಾಕ್ ಬಂಧಿತ ಆರೋಪಿ. ಆರೋಪಿಯು, ಹಿಂದೂ ಯುವತಿ ಜೊತೆ ದೈಹಿಕ ಸಂಪರ್ಕ ಬೆಳೆಸಿ, ವರಸೆ ಬದಲಿಸಿ ಮುಸ್ಲಿಂ ಯುವತಿ ಜೊತೆ ಎಂಗೇಜ್‌ಮೆಂಟ್ ಆಗಿದ್ದ ಎಂದು ತಿಳಿದುಬಂದಿದೆ. ಆರೋಪಿ ವಿರುದ್ಧ ಸಂತ್ರಸ್ತ ಯುವತಿ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ದೂರು ದಾಖಲಿಸಿದ್ದರು. ಕೃತ್ಯ ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದರಿಂದ ಪೊಲೀಸರು ಪ್ರಕರಣವನ್ನು ವರ್ಗಾಯಿಸಿದ್ದರು. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಎಸ್, ಸಂತ್ರಸ್ತ ಯುವತಿಯನ್ನು ಆರೋಪಿ ಇಶಾಕ್ ಪ್ರೀತಿಸಿ, ಮದುವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ. ಬಳಿಕ ಆರೋಪಿ ಹಾಗೂ ಆತನ ಭಾವ ಸೇರಿಕೊಂಡು ಯುವತಿಯನ್ನು ಮತಾಂತರ ಆಗುವಂತೆ ಒತ್ತಡ ಹೇರಿದ್ದರು. ಆದರೆ ಯುವತಿ ಒಪ್ಪದ್ದಕ್ಕೆ ವರಸೆ ಬದಲಿಸಿ ಮುಸ್ಲಿಂ ಯುವತಿ ಜೊತೆ ಎಂಗೇಜ್‌ಮೆಂಟ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸಧ್ಯ ಆರೋಪಿ ಬಂಧಿಸಿರುವ ಪೊಲೀಸರು, ಇದೀಗ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.



