HomePolitics Newsಕಾಂಗ್ರೆಸ್ ನವರು ನಮ್ಮ ಮೇಲೆ ಮಾಡಿರುವ ಆರೋಪ ಯಾವುದು ಸತ್ಯವಲ್ಲ‌: ಸಂಸದ ಬೊಮ್ಮಾಯಿ

ಕಾಂಗ್ರೆಸ್ ನವರು ನಮ್ಮ ಮೇಲೆ ಮಾಡಿರುವ ಆರೋಪ ಯಾವುದು ಸತ್ಯವಲ್ಲ‌: ಸಂಸದ ಬೊಮ್ಮಾಯಿ

For Dai;y Updates Join Our whatsapp Group

Spread the love

ಹಾವೇರಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಆರಂಭವಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ, ಬಳ್ಳಾರಿ ಜಿಲ್ಲೆಯ ಸಂಡೂರು, ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಇನ್ನೂ ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರೊಂದಿಗೆ ಸಂಸದ ಬಸವರಾಜ ಬೊಮ್ಮಾಯಿ ಶಿಗ್ಗಾವಿ ಪಟ್ಟಣದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ-1 ನಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿ  ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ಆರಂಭದಿಂದಲೂ ನೂರಕ್ಕು ನೂರು ಸಾಮಾನ್ಯ ಮತದಾರರು ಬಹಿರಂಗ ಬೆಂಬಲ ವ್ಯಕ್ತ ಪಡಿಸಿದ್ದಾರೆ. ದಿನೇ ದಿನೆ ಹೆಚ್ಚಳವಾಗಿದೆ‌ ಇದೆಲ್ಲದರ ಹಿನ್ನೆಲೆಯಲ್ಲಿ ಭರತ್ ಬೊಮ್ಮಾಯಿ ಬಹಳ ಅಂತರದಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸರ್ಕಾರ ವಿಧಾನಸೌಧಕ್ಕೆ ಕೀಲಿ ಹಾಕಿ ಹಣದ ಚೀಲ ಹಿಡಿದುಕೊಂಡು ಬಂದು ಚುನಾವಣೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ ಸರ್ಕಾರಿ ಕೆಲಸಗಳನ್ನು ನಿಲ್ಲಿಸಿ ಚುನಾವಣೆ ನಡೆಸಿದ್ದಾರೆ. ಅವರು ತಮ್ಮ ರಾಜಕೀಯ ಅಧಪತನವನ್ನು ಈ ರೀತಿ ತೊರಿಸಿದ್ದಾರೆ ಎಂದರು.

ಕಾಂಗ್ರೆಸ್ ನವರು ನಮ್ಮ ಮೇಲೆ ಮಾಡಿರುವ ಅರೋಪ ಯಾವುದು ಸತ್ಯವಲ್ಲ‌. ನವೆಂಬರ್ 23 ರಕ್ಕೆ ಅದಕ್ಕೆಲ್ಲ ಉತ್ತರ ಸಿಗುತ್ತದೆ ಎಂದರು. ಕಾಂಗ್ರೆಸ್ ಅಭ್ಯರ್ಥಿ ರೌಡಿ ಶೀಟರ್ ಪ್ರಕರಣ ಇನ್ನು ಖುಲಾಸೆಯಾಗಿಲ್ಲ ಎಂದು ಎಸ್ಪಿ ಅವರೇ ಹೇಳಿದ್ದರು. ಅವರೇ ಎರಡು ತಾಸಿನಲ್ಲಿ ಉಲ್ಟಾ ಹೊಡೆದರು. ಗೃಹ ಇಲಾಖೆ ಪೊಲೀಸರನ್ನು ಸಂಪೂರ್ಣ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!