ಶಿವಮೊಗ್ಗ: ಕಡವೆ ಶಿಕಾರಿ ಮಾಡಿದ್ದ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿವ, ವೆಂಕಟೇಶ್, ಮಂಜಪ್ಪ, ವಿನೋದ್ ಬಂಧಿತ ಆರೋಪಿಗಳು.
ಉಂಬ್ಳೇಬೈಲು ಅರಣ್ಯ ವ್ಯಾಪ್ತಿಯಲ್ಲಿ ಕಡವೆ ಶಿಕಾರಿ ಮಾಡಿದ್ದ ನಾಲ್ವರು ಮಾಂಸ ಮಾಡಿ ಮಾರಾಟಕ್ಕೆ ಮುಂದಾಗಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಅರಿತ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮಾಂಸ ಸಹಿತ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಉಂಬ್ಳೇಬೈಲು ವಲಯ ಅರಣ್ಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



