HomeGadag Newsದೇಶದ ಕಟ್ಟಕಡೆಯ ವ್ಯಕ್ತಿಗೂ ನೆಮ್ಮದಿಯ ಬದುಕು ನೀಡಲು ಸಂವಿಧಾನದಿಂದ ಸಾಧ್ಯ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ದೇಶದ ಕಟ್ಟಕಡೆಯ ವ್ಯಕ್ತಿಗೂ ನೆಮ್ಮದಿಯ ಬದುಕು ನೀಡಲು ಸಂವಿಧಾನದಿಂದ ಸಾಧ್ಯ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಭಾರತವು ಅತ್ಯಂತ ಶ್ರೇಷ್ಠ ಸಂವಿಧಾನ ಹೊಂದಿದ ರಾಷ್ಟ್ರವಾಗಿದೆ. ದೇಶದ ಕಟ್ಟಕಡೆಯ ವ್ಯಕ್ತಿಗೂ ನೆಮ್ಮದಿಯ ಬದುಕು ನೀಡಲು ಸಂವಿಧಾನದಿಂದ ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು. 

ಸಂವಿಧಾನ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ನಮನ  ಸಲ್ಲಿಸಿ ಮಾತನಾಡಿದರು.

ದೇಶದ ಸಂವಿಧಾನದ ಪೀಠಿಕೆಯಲ್ಲಿ ನಮ್ಮ ದೇಶದ ಪ್ರಜಾಪ್ರಭುತ್ವದ ಹಿರಿಮೆ, ಶಕ್ತಿ ಹಾಗೂ ಅದರ ಶ್ರೇಷ್ಠ ಗುಣಗಳು ಅಡಗಿವೆ. ಸರ್ವಧರ್ಮಗಳಿಗೂ ಸಮಭಾವ ಎಂಬ ಸದಾಶಯ ಸಂವಿದಾನದ ಮುಖ್ಯ ಧ್ಯೇಯವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಅವರು, ಭಾರತವನ್ನು ಒಂದು ಸಾರ್ವಭೌಮ, ಸಮಾಜವಾದಿ, ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಸಮಸ್ತ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ -ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು ರಾಷ್ಟçದ ಏಕತೆಯನ್ನು ಮತ್ತು ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಭ್ರಾತೃಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವ ಸಂಕಲ್ಪ ಮಾಡುವ ಕುರಿತು ಸಂವಿಧಾನದ ಪೀಠಿಕೆಯನ್ನು ಓದಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ., ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮುದಾಯದವರು, ಗಣ್ಯರು, ಸಾರ್ವಜನಿಕರು ಹಾಜರಿದ್ದರು


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!