Homecultureಪಾಲಕರ ತ್ಯಾಗದಲ್ಲಿ ಮಕ್ಕಳ ಭವಿಷ್ಯ ಅಡಗಿದೆ

ಪಾಲಕರ ತ್ಯಾಗದಲ್ಲಿ ಮಕ್ಕಳ ಭವಿಷ್ಯ ಅಡಗಿದೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಪಾಲಕರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಹಗಲಿರುಳೂ ಶ್ರಮಿಸುತ್ತಾರೆ. ತಮ್ಮ ನೋವನ್ನು ಮುಚ್ಚಿಟ್ಟು ಮಕ್ಕಳ ನಲಿವಿಗಾಗಿ ಅವರು ಏನೆಲ್ಲವನ್ನೂ ತ್ಯಾಗ ಮಾಡಲು ಮುಂದಾಗುತ್ತಾರೆ.

ಪಾಲಕರ ತ್ಯಾಗದಲ್ಲಿ ಮಕ್ಕಳ ಭವಿಷ್ಯ ಅಡಗಿದೆ ಎಂದು ಹಿರೇಮಠದ ಷ.ಬ್ರ. ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯರು ಹೇಳಿದರು.

ಪಟ್ಟಣದ ಶ್ರೀ ಜಗದ್ಗುರು ಪಂಚಾಚಾರ್ಯ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆಯ ಶ್ರೀ ರೇಣುಕಾಚಾರ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪಾಲಕರ ಸಭೆಯ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.

ಪ್ರತಿ ಮಕ್ಕಳ ತಾಯಂದಿರು ಮಕ್ಕಳಿಗೆ ಸಂಸ್ಕಾರ ನೀಡಿದರೆ, ತಂದೆ ಆರ್ಥಿಕ ಸಹಾಯದ ಹಸ್ತ ಚಾಚುತ್ತಾನೆ.

ಇದರಿಂದ ಮಕ್ಕಳು ಮಾನಸಿಕ ನೆಮ್ಮದಿಯೊಂದಿಗೆ ಶೈಕ್ಷಣಿಕ ಪ್ರಗತಿ ಹೊಂದಲು ಸಹಕಾರಿಯಾಗಲಿದೆ. ಇಲ್ಲಿನ ಮಕ್ಕಳು ನೈತಿಕ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿಯೂ ತಮ್ಮ ಪ್ರತಿಭೆಯನ್ನು ತೋರ್ಪಡಿಸುತ್ತಿರುವುದು ಶ್ಲಾಘನೀಯವಾಗಿದೆ. ಇಂದಿನ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಮಕ್ಕಳು ಹಿಂದಿನ ಕಾಲದ ವಸ್ತುಗಳನ್ನು ಸಂಗ್ರಹಿಸಿ ಕಾಲಕ್ಕನುಗುಣವಾಗಿ ಬದಲಾದ ಅವುಗಳ ವಿವಿಧ ಮಾದರಿಗಳನ್ನು ಪ್ರದರ್ಶಿಸಿದ್ದಾರೆ.

ನೀರಿನ ಸದ್ಬಳಕೆ, ತ್ಯಾಜ್ಯಗಳಿಂದ ವಿದ್ಯುತ್ ಉತ್ಪಾದನೆ, ರಾಮಮಂದಿರ, ಮತ್ತು ಭಾರತ ದೇಶದ ವಿವಿಧ ರಾಜ್ಯಗಳಲ್ಲಿನ ಆಹಾರ ಪದಾರ್ಥಗಳ ಉತ್ಪಾದನೆಯಂತಹ ವಿವಿಧ ಮಾದರಿಯ ವಸ್ತುಪ್ರದರ್ಶನದ ಮೂಲಕ ತಮ್ಮ ವಿಚಾರಶಕ್ತಿಯನ್ನು ಅಭಿವ್ಯಕ್ತಗೊಳಿಸಿದ್ದಾರೆ. ಪಾಲಕರಾದವರು ಸಾಧ್ಯವಾದಷ್ಟು ಅವರೊಂದಿಗೆ ಹರ್ಷದಿಂದ ಇದ್ದು ಶುಚಿತ್ವದಿಂದ ಉತ್ತಮ ಸಂಸ್ಕಾರಿತ ಚಾರಿತ್ರö್ಯತೆಯುಳ್ಳವರನ್ನಾಗಿ ಮಾಡುವುದರಿಂದ ಈ ದೇಶದ ಉತ್ತಮ ಪ್ರಜೆಯಾಗಿ ಉನ್ನತ ಸ್ಥಾನಮಾನಗಳನ್ನು ಪಡೆಯಲು ಸಾಧ್ಯವಾಗುತ್ತೆಂದು ಶ್ರೀಗಳು ತಿಳಿಸಿದರು.
ವಿಜ್ಞಾನ ವಸ್ತು ಪ್ರದರ್ಶನದ ನಿರ್ಣಾಯಕರಾಗಿ ಪಾಲ್ಗೊಂಡ ಬಸವರಾಜ ಕುರಿ ಮಾತನಾಡಿ, ಪ್ರಾಥಮಿಕ ಶಾಲಾ ಹಂತದ ಮಕ್ಕಳಿಗೆ ಇಂತಹ ವಿಜ್ಞಾನ ವಸ್ತು ಪ್ರದರ್ಶನ ಆಯೊಜನೆ ಮಾಡುವದರಿಂದ ಅವರಲ್ಲಿನ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಅತಿಥಿಗಳಾಗಿ ಸಂಸ್ಥೆಯ ಉಪಾಧ್ಯಕ್ಷ ಎಸ್.ಕೆ. ಪಾಟೀಲ, ಕಾರ್ಯದರ್ಶಿ ಈಶ್ವರ ಬೆಟಗೇರಿ, ಡಾ. ಆರ್.ಕೆ. ಗಚ್ಚಿನಮಠ, ಶರಣಪ್ಪ ಜುಟ್ಲದ ಹಾಗೂ ಮುಖ್ಯೋಪಾಧ್ಯಾಯೆ ನಿರ್ಮಲಾ ಹಿರೇಮಠ ಉಪಸ್ಥಿತರಿದ್ದರು.

ಪಾಲಕರಿಗಾಗಿ ಆಟೋಟದ ಸ್ಪರ್ಧೆ ನಡೆಸಿಕೊಟ್ಟ ದೈಹಿಕ ಶಿಕ್ಷಕ ಆರ್.ಎಸ್. ನರೇಗಲ್ಲ, ವಿ.ಎ. ಕುಂಬಾರವರನ್ನು ಸನ್ಮಾನಿಸಲಾಯಿತು.

ವಿವಿಧ ಕ್ರೀಡಾ ಚಟುವಟಿಕೆಯಲ್ಲಿ ವಿಜೇತರಾದ ಮಕ್ಕಳಿಗೆ ಹಾಗೂ ಪಾಲಕರಿಗೆ ಬಹುಮಾನ ವಿತರಿಸಲಾಯಿತು.

ಎ.ಎಮ್. ಬೆಟಗೇರಿ ಸ್ವಾಗತಿಸಿದರು. ಈಶ್ವರ ಆದಿ ನಿರೂಪಿಸಿದರು. ವಿಜಯಲಕ್ಷ್ಮಿ ಬಿಂಗಿ ವಂದಿಸಿದರು.

ನರೇಗಲ್ಲ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬಿ.ಕೆ. ಸವಿತಕ್ಕ ಮಾತನಾಡಿ, ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಆಧ್ಯಾತ್ಮದ ಚಿಂತನೆಯೂ ಅಷ್ಟೇ ಮುಖ್ಯ. ಪ್ರತಿನಿತ್ಯ ವಿದ್ಯಾರ್ಥಿಗಳು ಧ್ಯಾನ, ವ್ಯಾಯಾಮ, ಕ್ರೀಡಾ ಚಟುವಟಿಕೆ ಬೆಳಸಿಕೊಂಡಲ್ಲಿ ಮನೋಬಲ, ಆತ್ಮಬಲ ವೃದ್ಧಿಗೊಳ್ಳಲು ಸಹಕಾರಿಯಾಗಲಿದೆ. ಇಂದಿನ ಮಕ್ಕಳೇ ನಾಳೆಯ ಪ್ರಜೆಗಳಾಗಲಿದ್ದು, ಸದಾ ಅಧ್ಯಯನದ ಮೂಲಕ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಿರಿ ಎಂದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!