HomeGadag Newsಮಹಾಂತೇಶ ಬೀಳಗಿ ನಿಧನಕ್ಕೆ ತೋಂಟದ ಶ್ರೀ ಶೋಕ

ಮಹಾಂತೇಶ ಬೀಳಗಿ ನಿಧನಕ್ಕೆ ತೋಂಟದ ಶ್ರೀ ಶೋಕ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾಗಿರುವುದು ಅತ್ಯಂತ ದುಃಖಕರವಾದ ಸಂಗತಿ. ಶ್ರೀಯುತರು ಸ್ವಪ್ರಯತ್ನದಿಂದ ಕೆ.ಪಿ.ಎಸ್.ಸಿ ಪರೀಕ್ಷೆ ಉತ್ತೀರ್ಣರಾಗಿ ಐಎಎಸ್ ಹುದ್ದೆಗೇರಿ, ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳೆಂದೇ ಹೆಸರುವಾಸಿಯಾಗಿದ್ದರು ಎಂದು ಡಂಬಳ-ಗದಗ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ತಮ್ಮ ಶೋಕ ವ್ಯಕ್ತಪಡಿಸಿದ್ದಾರೆ.

ನಮ್ಮ ಶ್ರೀಮಠದ ವಿದ್ಯಾಸಂಸ್ಥೆಯಲ್ಲಿ ತರಬೇತಿ ಪಡೆದಿದ್ದ ಅವರು ಬೆಳಗಾವಿ, ಬೀದರ, ದಾವಣಗೆರೆ ಮುಂತಾದ ಜಿಲ್ಲೆಗಳಲ್ಲಿ ಉಪವಿಭಾಗಾಧಿಕಾರಿಯಾಗಿ, ಜಿಲ್ಲಾ ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಜಿಲ್ಲಾಧಿಕಾರಿಯಾಗಿ, ಪ್ರಸ್ತುತ ಕರ್ನಾಟಕ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದರು. ಸಾಮಾಜಿಕ ಕಳಕಳಿ, ಶಿಕ್ಷಣ ಪ್ರೇಮ ಹೊಂದಿದ್ದ ಮಹಾಂತೇಶ ಬೀಳಗಿ ಅವರ ಅಕಾಲಿಕ ನಿಧನವು ನಮ್ಮ ಸಮಾಜಕ್ಕೆ, ತನ್ಮೂಲಕ ನಮ್ಮ ರಾಜ್ಯಕ್ಕೆ ತುಂಬಲಾಗದ ನಷ್ಟವನ್ನುಂಟು ಮಾಡಿದೆ.

ಸದಾ ವಿಭೂತಿಧಾರಣ ಮಾಡಿಕೊಂಡು ಹಸನ್ಮುಖಿಯಾಗಿ, ಲವಲವಿಕೆಯಿಂದ ಇರುತ್ತಿದ್ದ ಮಹಾಂತೇಶ ಬೀಳಗಿ ಯುವಕರಿಗೆ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಸ್ಫೂರ್ತಿಯ ಚೇತನವಾಗಿದ್ದರು. ಜನಸಾಮಾನ್ಯರ ಕಷ್ಟಗಳಿಗೆ ಮಿಡಿಯುವ ಹೃದಯ ವೈಶಾಲ್ಯತೆ ಹೊಂದಿದ್ದರು. ಅವರು ಇಂದು ಇಲ್ಲ ಎನ್ನುವುದನ್ನು ನಂಬುವುದಕ್ಕಾಗುತ್ತಿಲ್ಲ. ಬಸವಾದಿ ಶರಣರು ಅವರಿಗೆ ಚಿರಶಾಂತಿಯನ್ನು ಮತ್ತು ಅವರ ಕುಟುಂಬವರ್ಗದವರಿಗೆ ಅಗಲುವಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ದಯಪಾಲಿಸಲಿ ಎಂದು ಶ್ರೀಗಳು ಪ್ರಾರ್ಥಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!