HomeUncategorizedರಾಜ್ಯದ ಜನತೆಯೇ ನಮ್ಮ ಮಾಲೀಕರು

ರಾಜ್ಯದ ಜನತೆಯೇ ನಮ್ಮ ಮಾಲೀಕರು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಹೊಸಪೇಟೆ: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆಗಳನ್ನು ಈಡೇರಿಸುತ್ತೇವೆ. ರಾಜ್ಯದ ಜನತೆಯೇ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಕಂದಾಯ ಇಲಾಖೆ ಆಯೋಜಿಸಿದ್ದ `ಸಮರ್ಪಣೆ ಸಂಕಲ್ಪ’ ಸಮಾವೇಶದಲ್ಲಿ 111111 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಿದ್ದರು.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ. ಹೀಗಿದ್ದರೂ ಬಿಜೆಪಿಯೇಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು.

ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ. ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದಿಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ರಾಜ್ಯದ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಸರ್ಕಾರ ತಮ್ಮ ಪಾಲನ್ನು ಕೊಡದೆ ಅನ್ಯಾಯ ಮಾಡುತ್ತಿದೆ. 15ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ತಿಳಿದಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5300 ಕೋಟಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದರು. ಇದನ್ನೂ ಈಡೇರಿಸಲಿಲ್ಲ ಎಂದು ಟೀಕಿಸಿದರು.

ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಶೇ.40 ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು. ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದರು.

1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮೀ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

2014ರಲ್ಲಿ 10 ಸಾವಿರ ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ 400 ಇರುವುದು ಈಗ 850 ರೂ ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ಮೋದಿಯವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆಯೇ ಹೊರತು ನಮ್ಮ ಸರ್ಕಾರದ ಪರವಾಗಿ ಜನಾಭಿಪ್ರಾಯ ಇದೆ. ಹೀಗಾಗಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಕಾರ್ಯಕ್ರಮವೇ ನಕಲಿಯಾಗಿದೆ

– ಸಿದ್ದರಾಮಯ್ಯ.

ಮುಖ್ಯಮಂತ್ರಿಗಳು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!