HomeKarnataka Newsಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ: ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ: ಸಿಎಂ ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ಬೆಳಗಾವಿ: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ.ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಉತ್ತರಿಸುತ್ತಾ, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಬಿಜೆಪಿಯವರು ಕಾಮಾಲೆಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ.

ನಮ್ಮ ಗ್ಯಾರಂಟಿಗಳನ್ನು ಬಿಹಾರ , ದೆಹಲಿ, ಮಹಾರಾಷ್ಟ್ರ, ಮದ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು , ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ ಕಾಂಗ್ರೆಸ್ ಸರ್ಕಾರ , ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದರು.

ಬಿಮ್ಸ್ ಆಸ್ಪತ್ರೆ-ಖಾಸಗಿ ನಿರ್ವಹಣೆ ಇಲ್ಲ
ಇಂದು ಬೆಳಗಾವಿಯ ಬಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು 2017 ರಲ್ಲಿ ಶಂಕುಸ್ಥಾಪನೆ ಹಾಗೂ ಇಂದು ಉದ್ಘಾಟನೆ ನೆರವೇರಿಸಿರುವುದು ಸಂತಸ ತಂದಿದೆ. ಬಿಜೆಪಿಯ ಅವಧಿಯಲ್ಲಿ ಈ ಯೋಜನೆ ಕಾರ್ಯಗತವಾಗಿರಲಿಲ್ಲ. ಆಸ್ಪತ್ರೆಯ ನಿರ್ವಹಣೆಯನ್ನು ಯಾವುದೇ ಖಾಸಗಿ ಸಂಸ್ಥೆಗೆ ನೀಡಲಾಗಿಲ್ಲ ಎಂದರು.

ಕಾಂಗ್ರೆಸ್ ನ ಆಂತರಿಕ ವಿಚಾರದಲ್ಲಿ ಬಿಜೆಪಿ ತಲೆಕೆಡಿಸಿಕೊಳ್ಳಬೇಕಿಲ್ಲ
ಶಾಸಕ ಸಿ.ಟಿ.ರವಿಯವರು ಮುಖ್ಯಮಂತ್ರಿಯವರ ವಿಚಾರದಲ್ಲಿ ಮಾಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಹುದ್ದೆ ವಿಷಯ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಾಗಿದ್ದು, ಇದಕ್ಕೆ ಬಿಜೆಪಿ ತಲೆಕೆಡಿಸಿಕೊಳ್ಳುವುದು ಬೇಕಿಲ್ಲ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!