ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದಲ್ಲಿ ಸಾರಿಗೆ ನೌಕರರಿಗೆ ಸಂಬಳ ನೀಡಲು ಹಣ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಾರಿಗೆ ಸಂಸ್ಥೆ 2,000 ಕೋಟಿ ರೂಪಾಯಿ ಸಾಲ ಮಾಡುವ ಹಂತಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರದಲ್ಲಿ ನೌಕರರಿಗೆ ಸಂಬಳ ನೀಡಲು ಹಣ ಇಲ್ಲ. ಸಿದ್ದರಾಮಯ್ಯ ಸರ್ಕಾರ ದಿವಾಳಿ ಆಗಿದೆ ಎಂದು ಹೇಳಿದರು.
ಇನ್ನೂ ಆಸ್ತಿ ನೋಂದಣಿ ದರ ಹೆಚ್ಚಳವಾಗಿದೆ. ಮದ್ಯದ ದರ ಹೆಚ್ಚಳವಾಗಿದೆ. ಈಗ ಸರ್ಕಾರ ಬಸ್ ಟಿಕೆಟ್ ದರ ಕೂಡ ಹೆಚ್ಚಳ ಮಾಡಿದೆ. ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿಗಳನ್ನು ನಿಲ್ಲಿಸಲು ಹೊರಟಿದ್ದಾರೆ. ಅಧಿಕಾರಕ್ಕಾಗಿ ಯಾವ ಕೀಳುಮಟ್ಟಕ್ಕೂ ಇಳಿಯಲು ಕಾಂಗ್ರೆಸ್ನವರು ಹಿಂದೆ ಸರಿಯಲ್ಲ. ಕಾಂಗ್ರೆಸ್ನವರು ಬರೀ ಸುಳ್ಳು ಹೇಳುತ್ತಾರೆ, ನಿರ್ಲಜ್ಜರು ಎಂದು ವಾಗ್ದಾಳಿ ನಡೆಸಿದ್ದಾರೆ.



