HomePolitics Newsಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತದೆ: ಸಚಿವ ಸತೀಶ್ ಜಾರಕಿಹೂಳಿ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತದೆ: ಸಚಿವ ಸತೀಶ್ ಜಾರಕಿಹೂಳಿ

For Dai;y Updates Join Our whatsapp Group

Spread the love

ಧಾರವಾಡ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೂಳಿ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರನ್ನ ನೇಮಿಸುವ ಅಧಿಕಾರ ನಮಗಿಲ್ಲ, ಅದನ್ನ ಹೈಕಮಾಂಡ್ ನೋಡುತ್ತೆ. ನೀವು ಕೆಪಿಸಿಸಿ ಅಧ್ಯಕ್ಷ ಪ್ರಬಲ ಆಕಾಂಕ್ಷಿಯಾ ಎಂಬ ಪ್ರಶ್ನೆಗೆ, ಈ ಬಗ್ಗೆ ಯಾವುದೇ ಪ್ರಸ್ತಾಪ ಆಗಿಲ್ಲ.

ಚರ್ಚೆ ಆಗಿಲ್ಲ, ಸಮಯ ಬಂದಾಗ ನೋಡೋಣ. ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ಅವರೇ ಹೇಳಿದ್ದಾರೆ. ದೇಶದ ನಾನಾ ರಾಜ್ಯಗಳ ಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಿದೆ. ಈಗ ತಕ್ಷಣ ಮಾಡಲು ಆಗದೆ ಇರಬಹುದು, ಆದ್ರೆ ಆಗಿಯೇ ಆಗುತ್ತೆ. ಅವರು ಯಾವಾಗ ಮಾಡ್ತಾರೆ ಎನ್ನುವುದನ್ನು ಕಾದು ನೋಡೋಣ ಎಂದರು.

ಇನ್ನೂ ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದು ನಮಗೆ ಗೊತ್ತಿಲ್ಲ, ಅದನ್ನು ದೆಹಲಿಯವರನ್ನೇ ಕೇಳಬೇಕು. ಸದ್ಯ ದಲಿತ ಸಿಎಂ ಪ್ರಶ್ನೆ ಇಲ್ಲ. ಜಾರಕಿಹೊಳಿ ಸಿಎಂ ಎಂಬ ಚರ್ಚೆ ವಿಚಾರ, ಅದು ನಮ್ಮ ಅಭಿಮಾನಿಗಳು ಹೇಳುತ್ತಾರೆ. ನಮ್ಮ ಅಭಿಮಾನಿಗಳಿಗೆ ನಾನು ಸಿಎಂ ಆಗಬೇಕೆಂಬ ಆಸೆ ಇದೆ, ಎಲ್ಲರಿಗೂ ಅಭಿಮಾನಿ ಇದ್ದಾರೆ. ಅವರವರ ಅಭಿಮಾನಿಗಳು ತಮ್ಮ ನಾಯಕರೇ ಸಿಎಂ ಆಗಲಿ ಅಂತಾರೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!