ಬೆಂಗಳೂರು: ತೆರಿಗೆ ಹಣವನ್ನೆಲ್ಲಾ ತೆಗೆದುಕೊಂಡು ಗ್ಯಾರಂಟಿಗಳಿಗೆ ಹಾಕಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರಿ, ರಸ್ತೆಯಲ್ಲಿ ಕಸ ಇರುವ ಕಾರಣ ರಸ್ತೆಗಳು ಬ್ಲಾಕ್ ಆಗಿವೆ.
ರಸ್ತೆಗಳು ಬ್ಲಾಕ್ ಆಗಿರುವುದರಿಂದ ಫುಟ್ಪಾತ್ನಲ್ಲಿ ಬೈಕ್ ಸಂಚರಿಸುತ್ತಿದ್ದಾರೆ. ಪಣತ್ತೂರಿನಲ್ಲಿ ಟನಲ್ನಲ್ಲಿ ಜನ ಸಂಚಾರ ಮಾಡುತ್ತಿದ್ದಾರೆ. ತೆರಿಗೆ ಹಣವನ್ನೆಲ್ಲಾ ತೆಗೆದುಕೊಂಡು ಗ್ಯಾರಂಟಿಗಳಿಗೆ ಹಾಕಿದ್ದಾರೆ. ಒಂದೊಂದು ರಸ್ತೆಗೆ 25 ಕೋಟಿಯಿಂದ 30 ಕೋಟಿ ರೂ ಬಿಲ್ ಬಾಕಿ ಇದೆ ಎಂದರು. ಮತಗಳ್ಳತನದ ವಿರುದ್ಧ ಕಾಂಗ್ರೆಸ್ನಿಂದ ಸಹಿ ಸಂಗ್ರಹ ಅಭಿಯಾನ ವಿಚಾರವಾಗಿ ಮಾತನಾಡಿದ್ದು,
ಕಾಂಗ್ರೆಸ್ನವರಿಗೆ ಯಾವುದು ಆದ್ಯತೆ ಅಂತ ಗೊತ್ತಾಯ್ತು ಅಲ್ವಾ? ಕಾಂಗ್ರೆಸ್ನವರಿಗೆ ರಸ್ತೆಗಳು, ಕಸದ ಸಮಸ್ಯೆ ಆದ್ಯತೆ ಆಗಲಿಲ್ಲ. ಆದರೆ ಇವರಿಗೆ ರಾಜ್ಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯನ್ನು ಮೆಚ್ಚಿಸಬೇಕು. ಯೋಗ್ಯತೆ ಇದ್ದರೆ ದೂರು ಕೊಡಲಿ, ನ್ಯಾಯಾಲಯಕ್ಕೆ ಹೋಗಲಿ. ಮಾನ ಮರ್ಯಾದೆ ಇದ್ದರೆ ಬಂದು ರಸ್ತೆ ಗುಂಡಿ ಮುಚ್ಚಬೇಕಿತ್ತು. ಆದರೆ ಗುಂಡಿಗಳಲ್ಲಿ ಜನರನ್ನು ಹಾಕಿ ಮುಚ್ಚುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.



