HomeKarnataka Newsಶ್ರೀಗಂಧ ಮರಗಳಿಗೆ ಕೊಡಲಿ ಹಾಕಿದ ಕಳ್ಳರು; ಅರಣ್ಯ ಇಲಾಖೆ ಬಲೆಗೆ ಬಿದ್ದ ಗ್ಯಾಂಗ್!

ಶ್ರೀಗಂಧ ಮರಗಳಿಗೆ ಕೊಡಲಿ ಹಾಕಿದ ಕಳ್ಳರು; ಅರಣ್ಯ ಇಲಾಖೆ ಬಲೆಗೆ ಬಿದ್ದ ಗ್ಯಾಂಗ್!

For Dai;y Updates Join Our whatsapp Group

ಬಾಗಲಕೋಟೆ: ಬೀಳಗಿ ತಾಲೂಕಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಅಂತರರಾಜ್ಯ ಶ್ರೀಗಂಧ ಕಳ್ಳಸಾಗಣೆ ಜಾಲವನ್ನು ಪತ್ತೆಹಚ್ಚಿದ್ದಾರೆ.

ಅಕ್ರಮವಾಗಿ ಕತ್ತರಿಸಿ ಮಾರಾಟಕ್ಕಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 450 ಕೆಜಿ ಶ್ರೀಗಂಧದ ಕಟ್ಟಿಗೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಬೀಳಗಿ ತಾಲೂಕಿನ ಯಡಹಳ್ಳಿ ಚಿಂಕಾರ ವನ್ಯಜೀವಿ ಧಾಮದ ಅರಣ್ಯ ಪ್ರದೇಶ ಹಾಗೂ ಅಮಲಝರಿ ಗ್ರಾಮದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆಗೆ ಇಳಿದ ಅಧಿಕಾರಿಗಳು, ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕತ್ತರಿಸಿ ಸಂಗ್ರಹಿಸಿಟ್ಟಿದ್ದ ಸ್ಥಳದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಭಾರಿ ಪ್ರಮಾಣದ ಶ್ರೀಗಂಧದ ಕಟ್ಟಿಗೆಗಳು ಪತ್ತೆಯಾಗಿವೆ.

ಬಂಧಿತ ಆರೋಪಿಗಳು ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಮೂಲದವರು ಎಂದು ತಿಳಿದುಬಂದಿದೆ. ಇವರು ಅಂತರರಾಜ್ಯ ಮಟ್ಟದಲ್ಲಿ ಶ್ರೀಗಂಧ ಕಳ್ಳಸಾಗಣೆ ದಂಧೆಯಲ್ಲಿ ತೊಡಗಿಸಿಕೊಂಡಿದ್ದರು ಎನ್ನಲಾಗಿದೆ.

ಸ್ಥಳೀಯ ಅರಣ್ಯ ಪ್ರದೇಶದಲ್ಲಿನ ಶ್ರೀಗಂಧದ ಮರಗಳನ್ನು ಕತ್ತರಿಸಿ, ಬಳಿಕ ಅವುಗಳನ್ನು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡಲು ಆರೋಪಿಗಳು ಯೋಜನೆ ರೂಪಿಸಿದ್ದರು ಎಂದು ಶಂಕಿಸಲಾಗಿದೆ.

ಬಾಗಲಕೋಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರದೀಪ ರಾಠೋಡ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಬೀಳಗಿ ವಲಯ ಅರಣ್ಯಾಧಿಕಾರಿ ಅಮೃತ ಗಂಡೋಸಿ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.

ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದಿರುವ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ಜಾಲದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img