ಕಲಬುರ್ಗಿ:- ಕಲಬುರ್ಗಿ ಪೊಲೀಸರು ಕಾರ್ಯಚರಣೆ ನಡೆಸಿ ಜಾನುವಾರು ಕಳ್ಳತನ ಮಾಡಿ ಜೀವನ ಸಾಗಿಸುತ್ತಿದ್ದವರನ್ನು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಕಳ್ಳರನ್ನು ಜಿಲಾನಿ ಮುಜಾವರ್, ಶ್ರೀಮಂತು, ನಾಶೇರ್, ಸೈಯದ್ ನಯೂಮ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 30 ಸಾವಿರ ರೂ. ಹಣ, ಗೂಡ್ಸ್ ಆಟೋ ಜಪ್ತಿ ಮಾಡಿಕೊಂಡಿದ್ದಾರೆ.
ಜಿಲ್ಲೆಯ ವಿವಿಧೆಡೆ ಜಾನುವಾರುಗಳನ್ನು ಕಳ್ಳತನ ಮಾಡಿ ಬಳಿಕ ಸಂತೆಯಲ್ಲಿ ಮಾರಾಟ ಮಾಡುತ್ತಿರುವುದ್ದಾಗಿ ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.
ಶಹಬಾದ್ ಹಾಗೂ ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



