HomePolitics Newsಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

For Dai;y Updates Join Our whatsapp Group

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಲಿ ಇರುವ ಮಹಿಳಾ ಸಚಿವ ಸ್ಥಾನವನ್ನು ಸದ್ಯ ಮುಖ್ಯಮಂತ್ರಿ ನಿರ್ವಹಿಸಲಿದ್ದಾರೆ. ಮೂವರೂ ಸಮರ್ಥರಾಗಿರುವುದರಿಂದ ಯಾರನ್ನು ಆಯ್ಕೆ ಮಾಡಬೇಕು ಎಂಬ ವಿಚಾರದಲ್ಲಿ ಗೊಂದಲವಿದ್ದು, ಈ ಕಾರಣದಿಂದ ನಿರ್ಧಾರ ವಿಳಂಬವಾಗುತ್ತಿದೆ ಎಂದು ಹೇಳಿದರು.

ಮಹಿಳಾ ಶಾಸಕಿಯೊಬ್ಬರಿಗೆ ಸಚಿವ ಸ್ಥಾನ ನೀಡುವವರೆಗೆ ಮುಖ್ಯಮಂತ್ರಿ ಖಾತೆಯನ್ನು ನಿರ್ವಹಿಸಲಿದ್ದಾರೆ. ಪಕ್ಷವು ಮೂವರಲ್ಲಿ ಯಾರನ್ನು ಸಚಿವರನ್ನಾಗಿ ಆಯ್ಕೆ ಮಾಡುತ್ತದೆಯೋ, ಅವರ ಪರವಾಗಿ ನಾವೆಲ್ಲರೂ ನಿಲ್ಲುತ್ತೇವೆ ಎಂದು ಸತೀಶ್‌ ಜಾರಕಿಹೊಳಿ ಹೇಳಿದರು.

ಖಾತೆ ಹಂಚಿಕೆ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಠ ಹಿಡಿದಿದ್ದರೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರನ್ನು ಸಚಿವರನ್ನಾಗಿ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಅಧಿವೇಶನ ಮುಗಿದ ಬಳಿಕ ಶಾಸಕಿಯೊಬ್ಬರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ತಿಳಿಸಿದರು.

ಸಚಿವ ಜಮೀರ್‌ ಅಹಮದ್‌ ಅವರು ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣಕ್ಕೆ ಹಿಂದೇಟು ಹಾಕಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸತೀಶ್‌ ಜಾರಕಿಹೊಳಿ, ಜಮೀರ್‌ ಅವರು ತಮ್ಮ ಪತ್ರದಲ್ಲಿ ಬಿಬಿಎಂಪಿ ಚುನಾವಣೆ ವಿಚಾರದ ಬಗ್ಗೆ ಬರೆದಿದ್ದಾರೆ. ಈ ಕುರಿತು ಅವರನ್ನೇ ಕೇಳಬೇಕು ಎಂದು ಹೇಳಿದರು.

ಬಿಜೆಪಿಯವರು ಮಾಡುತ್ತಿರುವ ಆರೋಪಗಳ ಕುರಿತು ಮಾತನಾಡಿದ ಅವರು, ಬಿಜೆಪಿಯವರ ಕಚೇರಿಯಲ್ಲಿಯೇ ಬಿಜೆಪಿ ನಾಯಕರು ಧ್ವಜ ಹಾರಿಸುವುದಿಲ್ಲ. ಹೀಗಿರುವಾಗ ನಮ್ಮ ಮೇಲೆ ಆರೋಪ ಮಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ತಿರುಗೇಟು ನೀಡಿದರು.

ಕಳೆದ 70 ವರ್ಷಗಳಲ್ಲಿ ಇಂತಹ ಹಲವು ಘಟನೆಗಳು ನಡೆದಿವೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಸತೀಶ್‌ ಜಾರಕಿಹೊಳಿ ಹೇಳಿದರು.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಠರಾವ್‌ ಪಾಸ್‌ ಮಾಡಲು ಬೆಳಗಾವಿ ಮಹಾನಗರ ಪಾಲಿಕೆ ಹಿಂದೇಟು ಹಾಕುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಚಾರಕ್ಕೆ ಸಂಬಂಧಿಸಿದ ಸಚಿವರಿದ್ದು, ಈಗಾಗಲೇ ಅವರ ಹಾಗೂ ಸರ್ಕಾರದ ಗಮನಕ್ಕೆ ವಿಷಯ ಬಂದಿದೆ ಎಂದು ತಿಳಿಸಿದರು.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಠರಾವ್‌ ಪಾಸ್‌ ಮಾಡಬೇಕು ಎನ್ನುವುದು ಬಹಳ ದಿನಗಳ ಬೇಡಿಕೆಯಾಗಿದೆ. ಆದರೆ, ಪಾಲಿಕೆ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಈ ಹಿಂದೆ ತಾವು ಹಾಗೂ ಜಿಲ್ಲಾಧಿಕಾರಿಗಳು ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು ಬಾರಿ ಸಲಹೆಗಳನ್ನು ನೀಡಿದ್ದೇವೆ ಎಂದು ಹೇಳಿದರು.

ಕಳೆದ ಮೂರು ತಿಂಗಳಿನಿಂದ ಸಭೆ ನಡೆಸಿಲ್ಲ. ಉದ್ದೇಶಪೂರ್ವಕವಾಗಿಯೇ ಸಭೆ ನಡೆಸುತ್ತಿಲ್ಲ ಎಂಬ ಅನುಮಾನವಿದೆ. ಈ ವಿಚಾರದಲ್ಲಿ ಮಾಧ್ಯಮಗಳು ಬೆಳಕು ಚೆಲ್ಲಬೇಕು ಎಂದು ಸತೀಶ್‌ ಜಾರಕಿಹೊಳಿ ಹೇಳಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img