ಬಳ್ಳಾರಿ: ಜನರಲ್ಲಿ ಭಯ ಹುಟ್ಟಿಸುವ ರೀತಿಯಲ್ಲಿ ನಕಲಿ ಬಂದೂಕುಗಳನ್ನು ಹಿಡಿದು ರೀಲ್ಸ್ ಮಾಡಿದ್ದ ಮೂವರು ಯುವಕರನ್ನು ಬಳ್ಳಾರಿ ಕೌಲ್ ಬಜಾರ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸಾಹಿಲ್, ವಿಕಾಸ್ ಮತ್ತು ಅಭಿಷೇಕ್ ಎಂದು ಗುರುತಿಸಲಾಗಿದೆ. ಆರೋಪಿಗಳು ನಗರದ ಬಂಡಿಹಟ್ಟಿ ಬಳಿಯ ಎಚ್‌ಎಲ್‌ಸಿ ಕಾಲುವೆ ಮೇಲಿನ ಪ್ರದೇಶದಲ್ಲಿ ನಕಲಿ ಡಬಲ್ ಬ್ಯಾರೆಲ್ ಬಂದೂಕು ಹಾಗೂ ಪಿಸ್ತೂಲ್ ಹಿಡಿದು ಭಯ ಹುಟ್ಟಿಸುವ ರೀತಿಯಲ್ಲಿ ರೀಲ್ಸ್ ಮಾಡಿದ್ದರು.
ಈ ವಿಡಿಯೋಗಳನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕರಲ್ಲಿ ಆತಂಕ ಉಂಟುಮಾಡುವ ರೀತಿಯ ವರ್ತನೆ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಮುಂದಿನ ತನಿಖೆ ನಡೆಯುತ್ತಿದೆ.



