HomeBengaluru Newsರಾಜ್ಯದಲ್ಲಿಂದು ಗುಡುಗು ಸಹಿತ ಆಲಿಕಲ್ಲು ಮಳೆ: 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! ಇಂದಿನ ಹವಾಮಾನ ವರದಿ...

ರಾಜ್ಯದಲ್ಲಿಂದು ಗುಡುಗು ಸಹಿತ ಆಲಿಕಲ್ಲು ಮಳೆ: 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! ಇಂದಿನ ಹವಾಮಾನ ವರದಿ ಹೀಗಿದೆ

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆಗೆ ತತ್ತರಿಸಿದೆ.

ಇಂದು ಕರಾವಳಿಯಲ್ಲಿ ಉಷ್ಣ ಅಲೆಯ ಆರ್ಭಟವಿರಲಿದ್ದು ಜೊತೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೀಟ್ ವೇವ್ ಅಲರ್ಟ್ ನೀಡಲಾಗಿದೆ.

ಈ ನಡುವೆ ವೈದ್ಯರು ಜನರಿಗೆ ಎಚ್ಚರಿಕೆ ನೀಡಿದ್ದು, ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಅನಗತ್ಯವಾಗಿ ಹೊರಗೆ ಹೋಗಬಾರದು, ಹೆಚ್ಚು ನೀರು ಸೇವಿಸಬೇಕು ಎಂದು ಸಲಹೆ ನೀಡಿದ್ದಾರೆ. ಮುಂದಿನ ಐದು ದಿನಗಳವರೆಗೆ ರಾಜ್ಯದ ಹಲವೆಡೆ ಇದೇ ರೀತಿಯ ಮಿಶ್ರ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!