HomeEntertainmentಟಾಲಿವುಡ್ ಖ್ಯಾತ ನಿರ್ಮಾಪಕ ಅರೆಸ್ಟ್! ಯಾಕೆ ಗೊತ್ತಾ..?

ಟಾಲಿವುಡ್ ಖ್ಯಾತ ನಿರ್ಮಾಪಕ ಅರೆಸ್ಟ್! ಯಾಕೆ ಗೊತ್ತಾ..?

For Dai;y Updates Join Our whatsapp Group

Spread the love

ತೆಲುಗಿಗೆ ಸಾಕಷ್ಟು ಹಿಟ್ ಮೂವಿ ಕೊಟ್ಟಿದ್ದ ಖ್ಯಾತ ನಿರ್ಮಾಪಕ ಬುರುಗಪಲ್ಲಿ ಶಿವ ರಾಮ ಕೃಷ್ಣ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನೂರಾರು ಕೋಟಿ ರೂಪಾಯಿ ಮೋಸ ಮಾಡಿದ ಆರೋಪಡದಿ ಅರೆಸ್ಟ್ ಮಾಡಲಾಗಿದೆ. ಎರಡು ದಶಕಗಳ ಕಾಲ ನಡೆದ ಪ್ರಕರಣದಲ್ಲಿ ಶಿವ ರಾಮ ಕೃಷ್ಣ ಅವರಿಗೆ ತೀವ್ರ ಹಿನ್ನಡೆ ಆಗಿದೆ.

ಸುಮಾರು 80 ಎಕರೆ ಜಮೀನನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ತನ್ನದು ಮಾಡಿಕೊಂಡಿದ್ದರು ಎಂಬ ಆರೋಪ ರಾಮ ಕೃಷ್ಣ ಅವರ ಮೇಲಿತ್ತು. ಹೈದರಾಬಾದ್​ ಬಳಿಯಲ್ಲಿಯೇ ಈ 80 ಎಕರೆ ಜಮೀನನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದು, ಜಮೀನಿನ ಈಗಿನ ಮೌಲ್ಯ ಸುಮಾರು 500 ಕೋಟಿಗೂ ಹೆಚ್ಚು ಎನ್ನಲಾಗುತ್ತದೆ. 2003 ರಲ್ಲಿಯೇ ಈ ಹಗರಣ ಬೆಳಕಿಗೆ ಬಂದು, ಆಗಿನ ಅವಿಭಜಿತ ಆಂಧ್ರ ಪ್ರದೇಶ ಸರ್ಕಾರ ಬುರುಗಪಲ್ಲಿ ಶಿವ ರಾಮ ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿತ್ತು.

ಪುರಾತತ್ವ ಇಲಾಖೆಯ ಹಿರಿಯ ಸಹಾಯಕ ಕೊತ್ತಿ ಚಂದ್ರಶೇಖರ್ ಎಂಬುವರ ನೆರವು ಪಡೆದು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದ ಬುರುಗಪಲ್ಲಿ ಶಿವ ರಾಮ ಕೃಷ್ಣ ಆ ನಂತರ ಬಿಲ್ಡರ್ ಮುರುಗ ಲಿಂಗಂ ಸಹಾಯ ಪಡೆದು ಅಲ್ಲಿ ನಿವೇಶನ ನಿರ್ಮಾಣ ಹಾಗೂ ಮಾರಾಟಕ್ಕೆ ಮುಂದಾಗಿದ್ದರು. ಬಿಲ್ಡರ್ ಮುರುಗ ಲಿಂಗಂ ಸಹ, ನಕಲಿ ದಾಖಲೆ ಸೃಷ್ಟಿಸಲು ಶಿವ ರಾಮ ಕೃಷ್ಣಗೆ ಸಹಾಯ ಮಾಡಿದ್ದರು. ಈಗ ಈ ಇಬ್ಬರನ್ನೂ ಸಹ ಬಂಧಿಸಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!