HomeIndia Newsಟ್ರಂಪ್–ಮೋದಿ ಮಾತುಕತೆ: ಹಾರ್ಮುಜ್ ಜಲಸಂಧಿ ಮುಕ್ತತೆಗೆ ಒತ್ತಾಯ, ಶಾಂತಿಗೆ ಭಾರತ ಬೆಂಬಲ!

ಟ್ರಂಪ್–ಮೋದಿ ಮಾತುಕತೆ: ಹಾರ್ಮುಜ್ ಜಲಸಂಧಿ ಮುಕ್ತತೆಗೆ ಒತ್ತಾಯ, ಶಾಂತಿಗೆ ಭಾರತ ಬೆಂಬಲ!

For Dai;y Updates Join Our whatsapp Group

Spread the love

ನವದೆಹಲಿ/ವಾಷಿಂಗ್ಟನ್‌: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವಿನ ದೂರವಾಣಿ ಮಾತುಕತೆ ಮಹತ್ವ ಪಡೆದಿದೆ.

ಮಂಗಳವಾರ ನಡೆದ ಈ ಮಾತುಕತೆಯಲ್ಲಿ ಹಾರ್ಮುಜ್ ಜಲಸಂಧಿ ಮುಕ್ತವಾಗಿಸುವ ಕಾರ್ಯತಂತ್ರಗಳು ಹಾಗೂ ಪಶ್ಚಿಮ ಏಷ್ಯಾದ ಪ್ರಸ್ತುತ ಪರಿಸ್ಥಿತಿ ಕುರಿತು ಉಭಯ ನಾಯಕರು ಚರ್ಚಿಸಿದ್ದಾರೆ.

ಈ ಕುರಿತು ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಟ್ರಂಪ್ ಮತ್ತು ಮೋದಿ ಮಧ್ಯಪ್ರಾಚ್ಯದ ಬೆಳವಣಿಗೆಗಳು ಹಾಗೂ ಜಲಸಂಧಿಯ ಮಹತ್ವದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಇದಾದ ಕೆಲವೇ ನಿಮಿಷಗಳಲ್ಲಿ ಪ್ರಧಾನಿ ಮೋದಿ ಕೂಡ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದು, “ಅಧ್ಯಕ್ಷ ಟ್ರಂಪ್ ಅವರೊಂದಿಗೆ ಮಾತುಕತೆ ನಡೆಸಿ ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಉಪಯುಕ್ತ ಅಭಿಪ್ರಾಯಗಳನ್ನು ಹಂಚಿಕೊಂಡೆವು. ಉದ್ವಿಗ್ನತೆಯನ್ನು ಕಡಿಮೆ ಮಾಡಿ ಶಾಂತಿಯನ್ನು ಶೀಘ್ರವಾಗಿ ಮರುಸ್ಥಾಪಿಸಲು ಭಾರತ ಬೆಂಬಲಿಸುತ್ತದೆ” ಎಂದು ಹೇಳಿದ್ದಾರೆ.

ಇನ್ನೂ, ಜಾಗತಿಕ ತೈಲ ಮತ್ತು ಇಂಧನ ವ್ಯಾಪಾರಕ್ಕೆ ಅತ್ಯಂತ ಪ್ರಮುಖವಾಗಿರುವ ಹಾರ್ಮುಜ್ ಜಲಸಂಧಿಯನ್ನು ಮುಕ್ತ, ಸುರಕ್ಷಿತ ಮತ್ತು ಎಲ್ಲರಿಗೂ ಪ್ರವೇಶಿಸಬಹುದಾದ ರೀತಿಯಲ್ಲಿ ಉಳಿಸುವುದು ಅಗತ್ಯ ಎಂದು ಮೋದಿ ಒತ್ತಿಹೇಳಿದ್ದಾರೆ.

ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಲು ಅಗತ್ಯ ಕ್ರಮಗಳ ಕುರಿತು ಮುಂದುವರಿದು ಸಂಪರ್ಕದಲ್ಲಿರಲು ಇಬ್ಬರು ನಾಯಕರು ಒಪ್ಪಿಕೊಂಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!