ಕೋಲಾರ: ಟಿಟಿ ವಾಹನ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದಂಪತಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಸುಣ್ಣಕಲ್ಲು ಕ್ರಾಸ್ ನಲ್ಲಿ ನಡೆದಿದೆ. ರಾಮಾಂಜಲು (36),ಕಲಾವತಿ (27) ಮೃತ ದಂಪತಿಗಳಾಗಿದ್ದು,
ಮೃತರು ಅಂದ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಯರಂವಾರಪಲ್ಲಿ ಗ್ರಾಮದ ನಿವಾಸಿಗಳಾಗಿದ್ದಾರೆ. ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದರು.
ಇಂದು ಸ್ವಗ್ರಾಮ ದಿಂದ ಬೆಂಗಳೂರಿಗೆ ಕೆಲಸಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿ ಈ ದುರ್ಘಟನೆ ನಡೆದಿದೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



