HomeKarnataka Newsಬಿಡದಿ ರೆಸಾರ್ಟ್‌ʼನಲ್ಲಿ ಒಡಿಶಾ ಕಾಂಗ್ರೆಸ್ ಶಾಸಕರಿಗೆ 5 ಕೋಟಿ ಆಫರ್ ಆರೋಪ: ಇಬ್ಬರು ವಶಕ್ಕೆ

ಬಿಡದಿ ರೆಸಾರ್ಟ್‌ʼನಲ್ಲಿ ಒಡಿಶಾ ಕಾಂಗ್ರೆಸ್ ಶಾಸಕರಿಗೆ 5 ಕೋಟಿ ಆಫರ್ ಆರೋಪ: ಇಬ್ಬರು ವಶಕ್ಕೆ

For Dai;y Updates Join Our whatsapp Group

Spread the love

ರಾಮನಗರ: ರಾಜ್ಯಸಭಾ ಚುನಾವಣೆ ಹಿನ್ನೆಲೆ ರಾಮನಗರ ಜಿಲ್ಲೆಯ ಬಿಡದಿಯ ವಂಡರ್ ಲಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದ ಒಡಿಶಾ ಕಾಂಗ್ರೆಸ್ ಶಾಸಕರಿಗೆ ಹಣದ ಆಫರ್ ನೀಡಲು ಯತ್ನಿಸಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಶಾಸಕರ ಖರೀದಿಗೆ ಬಂದಿದ್ದ ಇಬ್ಬರು ಒಡಿಶಾ ಮೂಲದ ವ್ಯಕ್ತಿಗಳು ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಶಾಸಕರಿಗೆ 5 ಕೋಟಿ ರೂಪಾಯಿ ಆಫರ್ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಆಪರೇಷನ್ ಕಮಲದ ಆತಂಕ ಹಿನ್ನೆಲೆ ಮಾರ್ಚ್ 12ರಂದು ಒಡಿಶಾದಿಂದ ಕಾಂಗ್ರೆಸ್ ಶಾಸಕರು ರಾಮನಗರದ ಬಿಡದಿ ವಂಡರ್ ಲಾ ರೆಸಾರ್ಟ್‌ಗೆ ಬಂದು ವಾಸ್ತವ್ಯ ಹೂಡಿದ್ದರು. ಈ ವೇಳೆ ಇಂದು ಬೆಳಿಗ್ಗೆ ಒಡಿಶಾದಿಂದ ಮೂವರು ವ್ಯಕ್ತಿಗಳು ಸ್ಥಳೀಯ ಒಬ್ಬ ವ್ಯಕ್ತಿಯೊಂದಿಗೆ ಸೇರಿ ಶಾಸಕರನ್ನು ಸಂಪರ್ಕಿಸಲು ಮುಂದಾಗಿದ್ದರು.

ಶನಿವಾರ ರಾತ್ರಿ ಹೋಟೆಲ್‌ನಲ್ಲಿ ರೂಂ ಬುಕ್ ಮಾಡಿದ್ದ ನಾಲ್ವರು ವ್ಯಕ್ತಿಗಳು ಬೆಳಿಗ್ಗೆ ಒಬ್ಬ ಶಾಸಕನೊಂದಿಗೆ ಮಾತುಕತೆ ನಡೆಸಿದ್ದಾರೆ. ಬಳಿಕ ಅವರೊಂದಿಗೆ ಫೋಟೋ ತೆಗೆದುಕೊಳ್ಳುವುದು ಮತ್ತು ಕೈಯಲ್ಲಿ ಚೆಕ್ ಬುಕ್ ಹಿಡಿದು ಮಾತನಾಡುತ್ತಿರುವುದು ಕಂಡು ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಅನುಮಾನ ಮೂಡಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಅವರನ್ನು ತಡೆದು ವಿಚಾರಣೆ ನಡೆಸಿದ ವೇಳೆ ಇಬ್ಬರು ಪರಾರಿಯಾಗಿದ್ದು, ಇಬ್ಬರು ಸಿಕ್ಕಿಬಿದ್ದಿದ್ದಾರೆ. ಬಿರೇಂದ್ರ ಪ್ರಸಾದ್ ಮತ್ತು ಅಜಿತ್ ಕುಮಾರ್ ಸಾಹು ಎಂಬವರು ಪೊಲೀಸರ ವಶದಲ್ಲಿದ್ದು, ಬಿಡದಿ ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!