HomeWorld NewsUSA-Iran Conflict: ಕಚ್ಚಾ ತೈಲ ಬೆಲೆ 92 ಡಾಲರ್‌ಗೆ ಏರಿಕೆ, ಭಾರತಕ್ಕೆ ಹೆಚ್ಚುತ್ತಾ ಹೊರೆ?

USA-Iran Conflict: ಕಚ್ಚಾ ತೈಲ ಬೆಲೆ 92 ಡಾಲರ್‌ಗೆ ಏರಿಕೆ, ಭಾರತಕ್ಕೆ ಹೆಚ್ಚುತ್ತಾ ಹೊರೆ?

For Dai;y Updates Join Our whatsapp Group

ಲಂಡನ್: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರಿ ಏರಿಕೆ ಕಂಡಿದೆ.

ಅಂತರರಾಷ್ಟ್ರೀಯ ಮಾನದಂಡವಾಗಿರುವ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ.1.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 92.09 ಡಾಲರ್‌ಗೆ ತಲುಪಿದೆ. ಜೂನ್ ತಿಂಗಳ ಬಳಿಕ ಇದು ದಾಖಲಾದ ಅತಿ ಹೆಚ್ಚಿನ ಬೆಲೆಯಾಗಿದೆ.

ಇದೇ ವೇಳೆ ಅಮೆರಿಕದ ಪ್ರಮುಖ ಕಚ್ಚಾ ತೈಲ ಮಾನದಂಡವಾದ ಡಬ್ಲ್ಯೂಟಿಐ ದರವೂ ಶೇ.1.1ರಷ್ಟು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 85.23 ಡಾಲರ್ ತಲುಪಿದೆ.

ಹಾರ್ಮುಜ್ ಜಲಸಂಧಿಯಲ್ಲಿ ಆತಂಕ:

ವಿಶ್ವದ ಸುಮಾರು 20% ತೈಲ ಸಾಗಣೆ ನಡೆಯುವ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ತೈಲ ಟ್ಯಾಂಕರ್‌ಗಳನ್ನು ತಡೆದು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಆತಂಕ ಹೆಚ್ಚಾಗಿದೆ.

ಅಮೆರಿಕದ ಸೇನಾ ನೆಲೆಗಳು ಹಾಗೂ ರೇಡಾರ್ ಕೇಂದ್ರಗಳ ಮೇಲೆ ಇರಾನ್ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಅಮೆರಿಕ ಕೂಡ ಇರಾನ್ ಆಸ್ತಿಗಳ ಮೇಲೆ ದಾಳಿ ನಡೆಸಿದೆ. ಈ ಬೆಳವಣಿಗೆಗಳು ತೈಲ ಮಾರುಕಟ್ಟೆಯಲ್ಲಿ ಅಸ್ಥಿರತೆ ಸೃಷ್ಟಿಸಿವೆ.

ಭಾರತ ಸೇರಿದಂತೆ ಆಮದುದಾರ ರಾಷ್ಟ್ರಗಳಿಗೆ ಹೊರೆ:

ಈ ಹಿಂದೆ ಅಮೆರಿಕ-ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ ಜೂನ್ ಕೊನೆಯ ವಾರದಲ್ಲಿ ಕಚ್ಚಾ ತೈಲ ದರ ಪ್ರತಿ ಬ್ಯಾರಲ್‌ಗೆ ಸುಮಾರು 70 ಡಾಲರ್‌ಗೆ ಇಳಿಕೆಯಾಗಿತ್ತು. ಆದರೆ ಇದೀಗ ಮತ್ತೆ ಬೆಲೆ ಏರಿಕೆ ಕಾಣುತ್ತಿದೆ.

ಕಚ್ಚಾ ತೈಲ ದರ ಏರಿಕೆಯಿಂದ ಸರಕು ಸಾಗಣೆ ವೆಚ್ಚ ಹೆಚ್ಚಾಗುವ ಸಾಧ್ಯತೆ ಇದ್ದು, ಜಾಗತಿಕ ಮಟ್ಟದಲ್ಲಿ ಹಣದುಬ್ಬರ ಏರಿಕೆಯ ಆತಂಕ ಎದುರಾಗಿದೆ. ತೈಲ ಬೆಲೆ ಏರಿಕೆಯ ಪರಿಣಾಮ ಏಷ್ಯನ್ ಷೇರು ಮಾರುಕಟ್ಟೆ ಹಾಗೂ ಹೂಡಿಕೆದಾರರ ಮೇಲೂ ಪರಿಣಾಮ ಬೀರಿದೆ.

ಭಾರತ ಸೇರಿದಂತೆ ಪ್ರಮುಖ ತೈಲ ಆಮದುದಾರ ರಾಷ್ಟ್ರಗಳಿಗೆ ಇದು ಆರ್ಥಿಕ ಒತ್ತಡ ಹೆಚ್ಚಿಸಬಹುದು. ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.

ತೈಲದ ಬೇಡಿಕೆ ಹೆಚ್ಚಾಗಿ ಪೂರೈಕೆ ಕಡಿಮೆಯಾದಾಗ ಬೆಲೆ ಏರಿಕೆಯಾಗುತ್ತದೆ. ಪ್ರಸ್ತುತ ಮಧ್ಯಪ್ರಾಚ್ಯದ ಸಂಘರ್ಷದಿಂದ ಪೂರೈಕೆ ಕುರಿತು ಆತಂಕ ಉಂಟಾಗಿರುವುದೇ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img