• About
  • Advertise
  • Privacy & Policy
  • Contact
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Tumakuru

ಮೌಲ್ಯಾಧಾರಿತ ಸುದ್ದಿ ಇಂದಿನ ಅಗತ್ಯ: ಸಿ.ಎಂ ಸಿದ್ದರಾಮಯ್ಯ

Vijaya Sakshi by Vijaya Sakshi
January 18, 2025
in Tumakuru
0
ಮೌಲ್ಯಾಧಾರಿತ ಸುದ್ದಿ ಇಂದಿನ ಅಗತ್ಯ: ಸಿ.ಎಂ ಸಿದ್ದರಾಮಯ್ಯ
0
SHARES
0
VIEWS
Share on FacebookShare on Twitter

ವಿಜಯಸಾಕ್ಷಿ ಸುದ್ದಿ, ತುಮಕೂರು: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮವಾದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ ಸಿದ್ದರಾಮಯ್ಯ ಕರೆ ನೀಡಿದರು.

ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ ವೃತ್ತಿ ಇದ್ದಾಗ ಸಮಾಜಕ್ಕೆ ಅನುಕೂಲ. ಸಮಾಜದಲ್ಲಿರುವ ಮೇಲು, ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಕರೆ ನೀಡಿದರು.

ಜನ ಪತ್ರಕರ್ತರ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೌಢ್ಯದ ಸುದ್ದಿಗಳನ್ನು, ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬೇಡಿ. ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮ ಬೆಳೆಯುತ್ತಿದೆ. ಇದು ಅವಕಾಶ, ಸವಾಲು ಎರಡೂ ಆಗಿದೆ ಎಂದರು.

ದೇಶದ ಪ್ರತಿಯೊಬ್ಬರೂ ಸಂವಿಧಾನ ಓದಬೇಕು. ಆಗ ಹಕ್ಕು-ಕರ್ತವ್ಯ ಎರಡೂ ಗೊತ್ತಾಗುತ್ತದೆ. ನಿಮ್ಮದು ಶಕ್ತಿಯುತ ಮಾಧ್ಯಮ. ಜನ ನಿಮ್ಮ ಕಡೆ ನೋಡುತ್ತಾ ಇದ್ದಾರೆ. ಈ ಎಚ್ಚರಿಕೆ ಸದಾ ಇರಲಿ ಎಂದರು.

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ. ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಪತ್ರಕರ್ತರ ಮಾಸಾಶನವನ್ನೂ 3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್. ರಾಜಣ್ಣ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರು, ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ಪತ್ರಕರ್ತ ಸಮುದಾಯದ ವೃತ್ತಿಪರ ಸಮಸ್ಯೆಗಳಿಗೆ ಅತ್ಯಂತ ಸಹೃದಯತೆಯಿಂದ ಸ್ಪಂದಿಸಿ, ಪರಿಹಾರ ಒದಗಿಸಿಕೊಡುತ್ತಿರುವುದರ ಜೊತೆಗೆ ಸಮ್ಮೇಳನದ ಯಶಸ್ಸಿಗೆ ಸಕಲ ರೀತಿಯಲ್ಲಿ ಸಹಕಾರ ನೀಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಸಮ್ಮೇಳನ ವಿಶೇಷ ಅಭಿನಂದನೆ ಸಲ್ಲಿಸಿತು.

ಪತ್ರಕರ್ತರ 39ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಮನುಸ್ಮೃತಿ ಓದಲು ಹೇಳಿದ ಪ್ರಸಂಗ ನಡೆಯಿತು.

ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಸಮಾಜದಲ್ಲಿರುವ ಜಾತಿ ತಾರತಮ್ಯವನ್ನು ಉಲ್ಲೇಖಿಸಿ ಮಾತನಾಡುವಾಗ `ಮೇಲು ಜಾತಿ-ಕೆಳ ಜಾತಿ’ ಎನ್ನುವ ಪದ ಬಳಸಿದರು. ಈ ವೇಳೆ ಸಚಿವ ರಾಜಣ್ಣ ಅವರು ಮೇಲು ಜಾತಿ-ಕೆಳ ಜಾತಿ ಎನ್ನುವ ಬದಲಿಗೆ ಮುಂದುವರೆದವರು, ಹಿಂದುಳಿದವರು ಎಂದು ಹೇಳಬಹುದು ಎಂದರು.

ಇದಕ್ಕೆ ಆಕ್ಷೇಪಿಸಿದ ಸಿಎಂ, ಜಾತಿ ಅನ್ನುವುದು ಈ ಸಮಾಜದ ವಾಸ್ತವ. ನೀನು ಮನುಸ್ಮೃತಿ ಓದಿದರೆ ಈ ಬಗ್ಗೆ ಇನ್ನಷ್ಟು ಸ್ಪಷ್ಟವಾಗುತ್ತದೆ. ಜಾತಿಯ ತಾರತಮ್ಯ ಎಷ್ಟು ಭೀಕರವಾಗಿದೆ ಎಂದು ಗೊತ್ತಾಗಬೇಕಾದರೆ ಅದಕ್ಕೆ ಮನುಸ್ಮೃತಿ ಓದು ಎಂದರು.

Tags: BreakingNewsC M SiddaramayyaKarnatakaVijayasakshivijayasakshinews
Previous Post

ಪ್ರೊ. ಎಸ್.ಎಸ್. ಪಟ್ಟಣಶೆಟ್ಟರಿಗೆ `ಸಮಾಜಸೇವಾಭೂಷಣ’ ಪ್ರಶಸ್ತಿ ಪ್ರದಾನ

Next Post

ಗದಗ ಸೇರಿದಂತೆ ವಿವಿಧ ಜಿಲ್ಲೆಗಳ ಒಟ್ಟು 18 ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಬಂಧನ

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಗದಗ ಸೇರಿದಂತೆ ವಿವಿಧ ಜಿಲ್ಲೆಗಳ ಒಟ್ಟು 18 ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಬಂಧನ

ಗದಗ ಸೇರಿದಂತೆ ವಿವಿಧ ಜಿಲ್ಲೆಗಳ ಒಟ್ಟು 18 ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಬಂಧನ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026
ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

October 21, 2026
ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

October 21, 2026

Recent News

Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper