ಬೆಂಗಳೂರು: ದೆಹಲಿ ಶ್ರದ್ಧಾ ಕೊಲೆ ಮಾದರಿಯಲ್ಲಿ ಬೆಂಗಳೂರಿನಲ್ಲೂ ನಡೆದಿದೆ. ಬೆಂಗಳೂರು ನಗರದ ವೈಯಾಲಿಕಾವಲ್‌ನಲ್ಲಿ ವಾಸವಿದ್ದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, 30ಕ್ಕೂ ಹೆಚ್ಚು ತುಂಡು ಮಾಡಿ ಪ್ರೀಜರ್ನಲ್ಲಿ ತುಂಬಲಾಗಿತ್ತು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯಾಲಿಕಾವಲ್ ಮಹಾಲಕ್ಷ್ಮಿ ಕೊಲೆಗಾರ ಯಾರೆಂದು ಗೊತ್ತಾಗಿದೆ, ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿಕೆ ನೀಡಿದ್ದಾರೆ.
ಘಟನೆಯ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೃತ್ಯವೆಸಗಿರುವ ವ್ಯಕಿ ಯಾರೆಂದು ತಿಳಿದು ಬಂದಿದೆ. ಆರೋಪಿ ಹೊರ ರಾಜ್ಯದವನಾಗಿದ್ದು ಬೆಂಗಳೂರಿನಲ್ಲಿ ವಾಸವಾಗಿದ್ದ. ಶೀಘ್ರದಲ್ಲಿ ಆತನನ್ನು ಬಂಧನ ಮಾಡಿ ವಿಚಾರಣೆಗೆ ಒಳಪಡಿಸುತ್ತೇವೆ. ನಂತರ ಉಳಿದ ವಿಚಾರಗಳ ಬಗ್ಗೆ ಮಾಹಿತಿ ನೀಡುತ್ತೇವೆ ಎಂದರು.



