ಶಿವಮೊಗ್ಗ: ಸಾಗರದ ಹಕ್ರೆ ಬಳಿಯ ಶರಾವತಿ ಹಿನ್ನೀರಿನಲ್ಲಿ ಮುಳುಗಿ, ಪಶು ವೈದ್ಯರು ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಸುನೀಲ್ (38) ಎಂದು ಗುರುತಿಸಲಾಗಿದೆ. ಅವರು ಸಾಗರದ ಮಾಸೂರಿನ ಪಶು ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಭಾನುವಾರ, ಕುಟುಂಬ ಸಮೇತ ಶರಾವತಿ ಹಿನ್ನೀರಿಗೆ ಪಿಕ್ನಿಕ್ಗೆ ತೆರಳಿದ್ದರು. ಈ ವೇಳೆ ನೀರಿನಲ್ಲಿ ಈಜಲು ಹೋಗಿದಾಗ ಮುಳುಗಿ ಸಾವನ್ನಪ್ಪಿದ್ದಾರೆ.
ಸುನೀಲ್ ನೀರಿನಲ್ಲಿ ನಾಪತ್ತೆಯಾಗುತ್ತಿದ್ದಂತೆ ಕುಟುಂಬಸ್ಥರು ಸ್ಥಳೀಯ ಪೊಲೀಸರು ಮಾಹಿತಿ ನೀಡಿದರು. ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶವವನ್ನು ನೀರಿನಿಂದ ಮೇಲಕ್ಕೆತ್ತಿದರು. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.



