ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದೆ. ಮಾರ್ಟ್‌ನಲ್ಲಿದ್ದ ಫ್ರಿಡ್ಜ್ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಅಂಗಡಿಯಲ್ಲಿದ್ದ ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದಾರೆ.
ಅಗ್ನಿ ಅವಘಡದಿಂದ ಮಾರ್ಟ್‌ನಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದ್ದು, ನಿಖರವಾಗಿ ಎಷ್ಟು ಪ್ರಮಾಣದ ನಷ್ಟವಾಗಿದೆ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಘಟನೆ ಗದಗ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



