ಬೆಂಗಳೂರು:- ಕೈಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಆರೋಪದಡಿ ನಿನ್ನೆ ಬಸವೇಶ್ವರ ನಗರ ಪೊಲೀಸರು, ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಹಾಗೂ ರಜತ್ ನನ್ನು ಅರೆಸ್ಟ್ ಮಾಡಿದ್ದರು.
ಆದರೆ ಇವರ ಬಂಧನ ಕೇಸ್‌ಗೆ ಇದೀಗ ಟ್ವಿಸ್ಟ್ ಸಿಕ್ಕಿದೆ. ನಿನ್ನೆ ಮಧ್ಯಾಹ್ನ ಅರೆಸ್ಟ್ ಆಗಿದ್ದ ಇಬ್ಬರೂ ಮಧ್ಯರಾತ್ರಿಯೇ ಬಿಡುಗಡೆಯಾಗಿದ್ದಾರೆ. ಇಬ್ಬರೂ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಸಿನಿಮೀಯ ಶೈಲಿಯಲ್ಲಿ ವೀಡಿಯೋ ಮಾಡಿ ಪೋಸ್ಟ್ ಮಾಡಿದ್ದರು. ಬಸವೇಶ್ವರ ನಗರ ಪೊಲೀಸರು ಇಬ್ಬರಿಗೂ ನೋಟಿಸ್ ನೀಡಿ ವಿಚಾರಣೆಗೆ ಬರುವಂತೆ ಸೂಚಿಸಿದ್ದರು. ಬಳಿಕ ಇಬ್ಬರನ್ನೂ ಬಂಧನಕ್ಕೆ ಒಳಪಡಿಸಲಾಗಿತ್ತು.
ನಿನ್ನೆ ಮಧ್ಯಾಹ್ನ ಬಂಧಿಸಿ, ಮಧ್ಯರಾತ್ರಿ ಬಿಡುಗಡೆ ಮಾಡಿರುವುದು ಪ್ರಶ್ನೆ ಹುಟ್ಟುಹಾಕಿದೆ. ಬಂಧನ ಮಾಡಿದ ಬಳಿಕ ಸ್ಟೇಷನ್ ಬೇಲ್ ಕೊಡಬೇಕು, ಇಲ್ಲದೇ ಹೋದರೆ ಕೋರ್ಟ್ ಬೇಲ್ ಆಗಬೇಕು. ತಡರಾತ್ರಿ ನೋಟಿಸ್ ಕೊಟ್ಟು ಆರೋಪಿಗಳಾದ ವಿನಯ್, ರಜತ್‌ನನ್ನ ಪೊಲೀಸರು ಕಳುಹಿಸಿದ್ದಾರೆ. ಆರೋಪಿಗಳಿಗೆ ಪೊಲೀಸರೇ ಶರಣಾದರೆ ಎಂಬ ಮಾತು ಕೇಳಿಬರುತ್ತಿದೆ.
ಸಾಮಾನ್ಯ ಜನರು ಇದ್ದಿದ್ದರೆ ಇದೇ ರೀತಿ ಮಾಡುತ್ತಿದ್ದರಾ ಪೊಲೀಸರು ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.



