HomeGadag Newsಹಿರೇಹಾಳ ಚೆಕ್‌ಪೋಸ್ಟ್‌ಗೆ ಎಸ್.ಕೆ. ಇನಾಮದಾರ ಭೇಟಿ, ಪರಿಶೀಲನೆ

ಹಿರೇಹಾಳ ಚೆಕ್‌ಪೋಸ್ಟ್‌ಗೆ ಎಸ್.ಕೆ. ಇನಾಮದಾರ ಭೇಟಿ, ಪರಿಶೀಲನೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಅಕ್ರಮ ನಗದು, ಸಾಮಗ್ರಿ ತಡೆಗಾಗಿ ಜಿಲ್ಲಾ ಆಡಳಿತ ಜಿಲ್ಲಾದ್ಯಂತ 12 ಸ್ಥಳಗಳಲ್ಲಿ ಚೆಕ್‌ಪೋಸ್ಟ್ ಗಳನ್ನು ತೆರೆದು ಪ್ರತಿ ದಿನ ನಿರಂತರವಾಗಿ ವಾಹನಗಳ ತಪಾಸಣೆ ಜರುಗಿಸಲಾಗುತ್ತಿದೆ.

ಸೋಮವಾರ ರೋಣ ತಾಲೂಕಿನ ಹಿರೇಹಾಳ ಚೆಕ್‌ಪೋಸ್ಟ್‌ಗೆ ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಕೆ. ಇನಾಮದಾರ ಭೇಟಿ ನೀಡಿ ಪರಿಶೀಲಿಸಿದರು. ಚೆಕ್‌ಪೋಸ್ಟ್ ನಲ್ಲಿ ನಡೆಸಲಾಗುವ ತಪಾಸಣೆ ಕುರಿತು ಮಾಹಿತಿ ಪಡೆದು, ದಾಖಲೆಗಳಿಲ್ಲದೆ ನಗದು, ಸಾಮಗ್ರಿ, ಚಿನ್ನಾಭರಣ, ಮದ್ಯ ಹಾಗೂ ವಾಣಿಜ್ಯ ಸರಕುಗಳನ್ನು ವಾಹನಗಳಲ್ಲಿ ಸಾಗಾಟ ಮಾಡುವುದನ್ನು ಪರಿಶೀಲಿಸಬೇಕು. ದಾಖಲೆರಹಿತ ಸಾಮಗ್ರಿಗಳು ನಗದು ದೊರೆತರೆ ನಿಯಮಾನುಸಾರ ಪ್ರಕರಣ ದಾಖಲಿಸುವಂತೆ ಚೆಕ್‌ಪೋಸ್ಟ್ ನಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ-ಸಿಬ್ಬಂದಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ರೋಣ ತಾಲೂಕಾ ಸಹಾಯಕ ನಿರ್ದೇಶಕ ರಿಯಾಜ ಖತೀಬ್ ಸೇರಿದಂತೆ ಚೆಕ್‌ಪೋಸ್ಟ್ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!