HomeGadag Newsಮತದಾನ ಜಾಗೃತಿ ಕಾರ್ಯಕ್ರಮ

ಮತದಾನ ಜಾಗೃತಿ ಕಾರ್ಯಕ್ರಮ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ವಿ.ಪಿ. ಗಾಲಾ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಕ್ಷೆ ರಚನಾ ಗಾಲಾ, ಸೆಕ್ರೆಟರಿ ಪಂಕಜ್ ಗಾಲಾ, ನಿರ್ದೇಶಕರಾದ ಗುಂಜನ ಗಾಲಾ, ಪ್ರಾಂಶುಪಾಲ ಅಮರಯ್ಯ ಚಿನ್ನಯ್ಯನಮಠ ಪಾಲ್ಗೊಂಡಿದ್ದರು.

ಪ್ರಾಂಶುಪಾಲ ಅಮರಯ್ಯ ಚಿನ್ನಯ್ಯನಮಠ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ದೇಶದ ಬೆಳವಣಿಗೆ ಮತ್ತು ಭವಿಷ್ಯದ ದೃಷ್ಟಿಯಿಂದ ಮತದಾರರ ಪಾತ್ರ ಮುಖ್ಯವಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಯಲು ಮತದಾನ ಮಹತ್ವದ್ದಾಗಿದೆ. ಜಗತ್ತಿನಲ್ಲಿಯೇ ಅತಿದೊಡ್ಡ ಸಂವಿಧಾನ ಹೊಂದಿರುವ ಭಾರತದಲ್ಲಿ ಚುನಾವಣೆಯ ಪಾತ್ರ ಹಿರಿದು. ಪ್ರತಿ ವಿದ್ಯಾರ್ಥಿಯು ಹಳ್ಳಿಗಳಲ್ಲಿ ಮತದಾನದ ಬಗ್ಗೆ ತಿಳಿಹೇಳಬೇಕು. ಎಲ್ಲರೂ ಸಾಮಾಜಿಕವಾಗಿ ತಮ್ಮ ಕರ್ತವ್ಯನಿರ್ವಹಿಸಬೇಕು ಎಂದರು.

ಕಾರ್ಯಕ್ರಮ ದಲ್ಲಿ ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!