HomeIndia Newsನಾವು ಭಯೋತ್ಪಾದಕರನ್ನು ಅವರ ಸ್ವಂತ ಮನೆಗಳಿಗೆ ನುಗ್ಗಿ ಹತ್ತಿಕ್ಕಿದ್ದೇವೆ: ಪ್ರಧಾನಿ ಮೋದಿ

ನಾವು ಭಯೋತ್ಪಾದಕರನ್ನು ಅವರ ಸ್ವಂತ ಮನೆಗಳಿಗೆ ನುಗ್ಗಿ ಹತ್ತಿಕ್ಕಿದ್ದೇವೆ: ಪ್ರಧಾನಿ ಮೋದಿ

For Dai;y Updates Join Our whatsapp Group

Spread the love

ಪಂಜಾಬ್:‌ ನಾವು ಭಯೋತ್ಪಾದಕರನ್ನು ಅವರ ಸ್ವಂತ ಮನೆಗಳಿಗೆ ನುಗ್ಗಿ ಹತ್ತಿಕ್ಕಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಂಜಾಬಿನ ಆದಂ‌ಪುರ ವಾಯುನೆಲೆಗೆ ಭೇಟಿ ನೀಡಿ ಐಎಎಫ್ ಯೋಧರನ್ನು ಉದ್ದೇಶಿಸಿ ಮೋದಿ ಮಾತನಾಡಿದ್ದಾರೆ. ಪಾಕಿಸ್ತಾನದಲ್ಲಿ ಭಯೋತ್ಪಾದಕರಿಗೆ ಯಾವುದೇ ಸ್ಥಳವೂ ಸುರಕ್ಷಿತವಲ್ಲ ಎಂಬ ಸಂದೇಶವನ್ನು ಭಾರತ ರವಾನಿಸಿದೆ.

ನಾವು ಅವರನ್ನು ಧೂಳೀಪಟ ಮಾಡಿದ್ದೇವೆ. ಭಾರತೀಯ ಸೇನೆ, ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆ ಪಾಕಿಸ್ತಾನಿ ಸೈನ್ಯವನ್ನು ಸೋಲಿಸಿವೆ. ಪಾಕಿಸ್ತಾನದಲ್ಲಿ ಭಯೋತ್ಪಾದಕರು ಶಾಂತಿಯುತವಾಗಿ ಬದುಕಲು ಯಾವುದೇ ಸ್ಥಳವೂ ಉಳಿದಿಲ್ಲ ಎಂಬ ಸಂದೇಶವನ್ನು ನಾವು ಅವರಿಗೆ ನೀಡಿದ್ದೇವೆ.

ನಾವು ಅವರ ಮನೆಯೊಳಗೆ ನುಗ್ಗಿ ಹೊಡೆದಿದ್ದೇವೆ. ನಮ್ಮ ಧರ್ಮದ ರಕ್ಷಣೆಗಾಗಿ ಶಸ್ತ್ರಾಸ್ತ್ರಗಳನ್ನು ಹಿಡಿಯುವುದು ನಮ್ಮ ಸಂಪ್ರದಾಯ. ಆದ್ದರಿಂದ, ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಕಸಿದುಕೊಂಡಾಗ ನಾವು ಭಯೋತ್ಪಾದಕರನ್ನು ಅವರ ಸ್ವಂತ ಮನೆಗಳಿಗೆ ನುಗ್ಗಿ ಹತ್ತಿಕ್ಕಿದ್ದೇವೆ” ಎಂದು ಮೋದಿ ಹೇಳಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!