ರಾಮನಗರ: ಚನ್ನಪಟ್ಟಣಕ್ಕೆ 500 ಕೋಟಿ ರೂ. ಕಾರ್ಯಕ್ರಮ ರೂಪಿಸಲಾಗಿದೆ. ಚಿನ್ನದ ನಾಡು ಮಾಡಲು ತೀರ್ಮಾನಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣದ ಅಭಿವೃದ್ಧಿಗೆ ದೀಪ ಹಚ್ಚಿದ್ದೇವೆ. ಕೊಟ್ಟ ಮಾತಿನಂತೆ ಚನ್ನಪಟ್ಟಣವನ್ನು ಅಭಿವೃದ್ಧಿ ಪುಟಕ್ಕೆ ಸೇರಿಸಿ ಮುನ್ನುಡಿ ಬರೆಯುತ್ತಿದ್ದೇವೆ. ಕರ್ನಾಟಕ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ.
ಚನ್ನಪಟ್ಟಣವನ್ನು ಚಿನ್ನದಂತ ನಾಡು ಮಾಡಲು ತೀರ್ಮಾನಿಸಿದ್ದೇವೆ. ನಾವು ಕೊಟ್ಟ ಮಾತು ಉಳಿಸಿಕೊಳ್ಳುತ್ತಾ ಬಂದಿದ್ದೇವೆ. ನಿಮ್ಮ ಮನೆ ಬಾಗಿಲಿಗೆ ಬಂದಾಗ 27 ಸಾವಿರ ಅರ್ಜಿ ಬಂದಿದ್ದು, ಅದರಲ್ಲಿ 18 ಸಾವಿರ ಅರ್ಜಿಗಳು, ಮನೆ ಹಾಗೂ ನಿವೇಶನ ಕೋರಿವೆ. ಈ ತಾಲೂಕಿನಲ್ಲಿ ನಿವೇಶನ ಹಂಚಿಕೆ ಮಾಡಲು 170 ಎಕರೆ ಜಾಗ ಗುರುತಿಸಲಾಗಿದೆ. ಇನ್ನೂ 150 ಎಕರೆ ಖರೀದಿಗೆ ನಾವು ಸಿದ್ಧವಾಗಿದ್ದೇವೆ ಎಂದು ಹೇಳಿದರು.



