HomeKarnataka Newsಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು? ಎಲ್ಲಿ ಸಲ್ಲಿಸಬೇಕು? ಇಲ್ಲಿದೆ ಮಾಹಿತಿ

ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು? ಎಲ್ಲಿ ಸಲ್ಲಿಸಬೇಕು? ಇಲ್ಲಿದೆ ಮಾಹಿತಿ

For Dai;y Updates Join Our whatsapp Group

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಮುಂದಾಗಿದೆ. ಯೋಜನೆಗಳ ವ್ಯಾಪ್ತಿಯಲ್ಲಿ ನಕಲಿ ಹಾಗೂ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ ಹೊಸದಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜಾರಿಗೆ ತರಲು ಸರ್ಕಾರ ಸಿದ್ಧತೆ ನಡೆಸಿದೆ.

ಮೂಲಗಳ ಪ್ರಕಾರ, ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಸೌಲಭ್ಯವನ್ನು ಮುಂದುವರಿಸಿಕೊಂಡು ಹೋಗಲು ಫಲಾನುಭವಿಗಳು ಹೊಸ ಅರ್ಜಿ ಸಲ್ಲಿಸುವುದು ಕಡ್ಡಾಯವಾಗುವ ಸಾಧ್ಯತೆ ಇದೆ. ಇದಕ್ಕಾಗಿ ಸರ್ಕಾರ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುವ ನಿರೀಕ್ಷೆಯಿದೆ.

ಹೊಸ ಅರ್ಜಿಯಲ್ಲಿ ಏನೆಲ್ಲ ಮಾಹಿತಿ?

ಗೃಹಲಕ್ಷ್ಮಿ ಯೋಜನೆಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೊಸ ಅರ್ಜಿ ನಮೂನೆಯನ್ನು ಸಿದ್ಧಪಡಿಸಿದ್ದು, ಅದನ್ನು ಸರ್ಕಾರ ಮತ್ತು ಹಣಕಾಸು ಇಲಾಖೆಯ ಪರಿಶೀಲನೆಗೆ ಕಳುಹಿಸಲಾಗಿದೆ.

ಹೊಸ ಅರ್ಜಿಯಲ್ಲಿ ಮನೆಯ ಯಜಮಾನಿಯ ಹೆಸರು, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ವಿವರ, ಕುಟುಂಬದ ಸದಸ್ಯರ ಮಾಹಿತಿ, ಜಾತಿ ವಿವರ, ಪತಿಯ ಹೆಸರು ಹಾಗೂ ಆಧಾರ್ ಸಂಖ್ಯೆ ಸೇರಿದಂತೆ ಹಲವು ಮಾಹಿತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ.

ಇದರ ಜೊತೆಗೆ ಫಲಾನುಭವಿಗಳು ಆದಾಯ ತೆರಿಗೆ (IT) ಅಥವಾ ಜಿಎಸ್‌ಟಿ ಪಾವತಿದಾರರೇ ಎಂಬ ಮಾಹಿತಿ, ಎಪಿಎಲ್ ಅಥವಾ ಬಿಪಿಎಲ್ ಪಡಿತರ ಚೀಟಿ ಹೊಂದಿರುವುದರ ವಿವರಗಳನ್ನೂ ನೀಡಬೇಕಾಗುತ್ತದೆ.

ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯ

ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿಸುವ ಉದ್ದೇಶದಿಂದ ಬಯೋಮೆಟ್ರಿಕ್ ದೃಢೀಕರಣವನ್ನೂ ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.

ರಾಜ್ಯದಲ್ಲಿ ಸದ್ಯ ಸುಮಾರು 1.30 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಮುಂದಿನ ದಿನಗಳಲ್ಲಿ ಹಣ ಪಡೆಯಲು ಫಲಾನುಭವಿಗಳು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ ಸೇರಿದಂತೆ ವಿವಿಧ ಸೇವಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಪರಿಶೀಲನೆ ಮಾಡಿಸಬೇಕಾಗುತ್ತದೆ.

ಈ ಪ್ರಕ್ರಿಯೆಗೆ ಆಧಾರ್ ಕಾರ್ಡ್ ಜೊತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡುವ ಗುರುತಿನ ಚೀಟಿ (ID) ಸಹ ಕಡ್ಡಾಯವಾಗಲಿದೆ.

ಜಾತಿ ಪ್ರಮಾಣಪತ್ರ ವಿವರಕ್ಕೂ ಆದ್ಯತೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳು ತಮ್ಮ ಜಾತಿ ಪ್ರಮಾಣಪತ್ರದಲ್ಲಿರುವ ಆರ್‌ಡಿ (RD) ಸಂಖ್ಯೆಯನ್ನು ಸಲ್ಲಿಸಬೇಕಾಗುತ್ತದೆ. ಅಗತ್ಯ ದಾಖಲೆಗಳು ಮತ್ತು ಬಯೋಮೆಟ್ರಿಕ್ ಪರಿಶೀಲನೆ ಪೂರ್ಣಗೊಂಡ ಬಳಿಕವೇ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗುವ ಸಾಧ್ಯತೆ ಇದೆ.

ಅರ್ಜಿ ಸಲ್ಲಿಕೆಗೆ ಹಲವು ಕೇಂದ್ರಗಳಲ್ಲಿ ಅವಕಾಶ

ಹೊಸ ಅರ್ಜಿ ಸಲ್ಲಿಕೆಗೆ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳ ಜೊತೆಗೆ ಆಫ್‌ಲೈನ್ ವ್ಯವಸ್ಥೆಯನ್ನೂ ಸರ್ಕಾರ ಕಲ್ಪಿಸುವ ಸಾಧ್ಯತೆ ಇದೆ. ಅಧಿಕೃತ ಆದೇಶ ಹೊರಬಿದ್ದ ಬಳಿಕ ಅರ್ಜಿ ಸಲ್ಲಿಕೆ ದಿನಾಂಕ ಮತ್ತು ವಿಧಾನವನ್ನು ಪ್ರಕಟಿಸಲಾಗುವುದು.

ಆದರೆ, ಈ ಎಲ್ಲ ಬದಲಾವಣೆಗಳಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಇನ್ನೂ ಅಂತಿಮ ಅಧಿಸೂಚನೆ ಪ್ರಕಟವಾಗಿಲ್ಲ. ಅಧಿಕೃತ ಆದೇಶ ಹೊರಬಂದ ಬಳಿಕವೇ ಹೊಸ ನಿಯಮಗಳ ಸಂಪೂರ್ಣ ಚಿತ್ರಣ ಸ್ಪಷ್ಟವಾಗಲಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img