ಬೆಂಗಳೂರು: ಪ್ಯಾಲೆಸ್ ಗ್ರೌಂಡ್‌ನಲ್ಲಿ ಅದ್ದೂರಿಯಾಗಿ ರಿಸೆಪ್ಷನ್ ಆಯೋಜಿಸಿ, ಶ್ರೀಲಂಕಾಕ್ಕೆ ಹನಿಮೂನ್‌ಗೆ ತೆರಳಿದ್ದ ನವದಂಪತಿ ಅರ್ಧದಲ್ಲೇ ವಾಪಸ್ಸಾಗಿದ್ದು, ನವವಧು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಜರುಗಿದೆ.
26 ವರ್ಷದ ಗಾನವಿ ಆತ್ಮಹತ್ಯೆಗೆ ಯತ್ನಿಸಿದ ನವವಿವಾಹಿತೆ. ಅಕ್ಟೋಬರ್ 29ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ದಂಪತಿ, ಪ್ಯಾಲೆಸ್ ಗ್ರೌಂಡ್‌ನಲ್ಲಿ ಅದ್ದೂರಿಯಾಗಿ ರಿಸೆಪ್ಷನ್ ನಡೆಸಿದ್ದರು. ಸುಮಾರು ಹತ್ತು ದಿನಗಳ ಹಿಂದೆ ಶ್ರೀಲಂಕಾಗೆ ಹನಿಮೂನ್‌ಗೆ ತೆರಳಿದರೂ, ಮಧ್ಯದಲ್ಲೇ ಇಬ್ಬರೂ ವಾಪಸ್ಸಾಗಿದ್ದರು.
ಬುಧವಾರ (ಡಿ.25) ಮಧ್ಯಾಹ್ನ ಪತಿ ಮನೆಯಲ್ಲಿ ನವವಧು ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ವಧುವಿನ ಕುಟುಂಬಸ್ಥರು ವರನ ಕುಟುಂಬದ ವಿರುದ್ಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಿರುಕುಳದ ಕಾರಣದಿಂದ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಆರೋಪಿಸಿದ್ದಾರೆ.



