ಅಮರಾವತಿ:- ಆಂಧ್ರಪ್ರದೇಶ ಕಡಪ ಜಿಲ್ಲೆಯ ಬೋಯಿನಪಲ್ಲಿ ಗ್ರಾಮದಲ್ಲಿ ಪತಿಯ ಕಣ್ಣೆದುರಲ್ಲೇ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ಕೃಷ್ಣವೇಣಿ ನೇಣಿಗೆ ಶರಣಾದ ಮಹಿಳೆ. ಹೆಂಡ್ತಿ ನೇಣು ಬಿಗಿದುಕೊಳ್ಳುವಾಗ ಪತಿ ಕಾಪಾಡದೇ ತನ್ನ ಮೊಬೈಲ್‍ನಲ್ಲಿ ವಿಡಿಯೋ ಸೆರೆಹಿಡಿದಿದ್ದಾನೆ. ಕೌಟುಂಬಿಕ ಕಲಹದಿಂದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಪತಿ ಶ್ರೀರಾಮ್ ಶ್ರೀನಿವಾಸ್ ತಡೆಯಲು ಪ್ರಯತ್ನಿಸುವ ಬದಲು, ಘಟನೆಯ ವಿಡಿಯೋವನ್ನು ರೆಕಾರ್ಡ್ ಮಾಡಿ, ನೀನು ಹಾಗೆ ಕುಣಿಕೆ ಕಟ್ಟಬಾರದು. ಅದನ್ನು ಹೀಗೆ ಮಾಡಬೇಕು ಎಂದು ಅವಳಿಗೆ ಸೂಚನೆ ನೀಡಿದ್ದ ಎಂದು ತಿಳಿದು ಬಂದಿದೆ.
ಆರಂಭದಲ್ಲಿ ತಮಾಷೆ ಮಾಡುತ್ತಿದ್ದಾಳೆ ಎಂದು ಗ್ರಹಿಸಿದ್ದರಿಂದ ಶ್ರೀನಿವಾಸ್ ತನ್ನ ಹೆಂಡತಿಯ ಪ್ರಾಣ ಉಳಿಸಲು ವಿಫಲನಾಗಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಪತ್ನಿ ಕೃಷ್ಣವೇಣಿ ಮೃತಪಟ್ಟಿದ್ದು, ಪತಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.



